ಶಶಿಕಲಾ ಸ್ಥಳಾಂತರ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ....

Published On :
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಸ್ಥಳಾಂತರಿಸಲು ಕರ್ನಾಟಕ ಬಂದಿಖಾನೆ ಇಲಾಖೆಗೆ ಸೂಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಸ್ ಕಮಲ್ ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಶಶಿಕಲಾ ಅವರನ್ನು ತುಮಕೂರಿನ ಮಹಿಳಾ ಜೈಲಿಗೆ ಸ್ಥಳಾಂತರಿಸಬೇಕು ಮತ್ತು ತಮಿಳುನಾಡು ಸಚಿವರಿಗೆ ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ಭೇಟಿಗೆ ಅವಕಾಶ ನೀಡದಂತೆ ಬಂದಿಖಾನೆ ಇಲಾಖೆಗೆ ಸೂಚಿಸಬೇಕು ಎಂದು ರಾಮಸ್ವಾಮಿ ಅವರು ಪಿಐಎಲ್ ಸಲ್ಲಿಸಿದ್ದರು.
ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು, ಕರ್ನಾಟಕ ಬಂದಿಖಾನೆ ನಿಯಮಾವಳಿ ಪ್ರಕಾರ ಶಶಿಕಲಾ ಭೇಟಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಕೋರ್ಟ್ ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


