ಇವಿಎಂ ದುರ್ಬಳಕೆ ಸಾಬೀತುಪಡಿಸಿ: ಕೇಜ್ರಿವಾಲ್ ಗೆ ಚುನಾವಣಾ ಆಯೋಗ ಬಹಿರಂಗ ಸವಾಲು
ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ....

Published On :
ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದ್ದು, ಇವಿಎಂ ಯಂತ್ರಗಳನ್ನು ತಿರುಚಲು ಸಾಧ್ಯ ಎಂಬುದಾದರೆ ಅದನ್ನು ಸಾಬೀತುಪಡಿಸುವಂತೆ ರಾಜಕೀಯ ನಾಯಕರಿಗೆ ಬಹಿರಂಗ ಸವಾಲು ಹಾಕಿದೆ.
ಇವಿಎಂಗಳನ್ನು ತಿರುಚಲು ಸಾಧ್ಯವಿದೆ ಎಂಬುದನ್ನು ಸಾಬೀತು ಮಾಡಲು ತಮಗೆ 72 ತಾಸು ಸಮಯ ಕೊಟ್ಟರೆ ಸಾಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಯೋಗಕ್ಕೆ ಸವಾಲೆಸೆದಿದ್ದರು. ಈ ಸವಾಲನ್ನು ಸ್ವೀಕರಿಸಿರುವ ಚುನಾವಣಾ ಆಯೋಗ, ಮತಯಂತ್ರಗಳನ್ನು ದುರ್ಬಳಕೆ ಮಾಡಲು ಸಾಧ್ಯವಿಲ್ಲ. ದುರ್ಬಳಕೆ ಸಾಧ್ಯ ಎಂಬುದಾದರೆ ಅದನ್ನು ಸಾಬೀತು ಪಡಿಸಿ. 2009ರಲ್ಲಿ ಇದೇ ರೀತಿ ನಮಗೆ ಸವಾಲು ಹಾಕಲಾಗಿತ್ತು. ಆದರೆ ಯಾರೊಬ್ಬರೂ ಮತಯಂತ್ರ ತಿರುಚಲು ಸಾಧ್ಯ ಎಂಬುದನ್ನು ಸಾಬೀತು ಪಡಿಸಿಲ್ಲ ಎಂದು ಆಯೋಗ ಹೇಳಿದೆ.
ಇವಿಎಂ ತಿರುಚಲು ಸಾಧ್ಯ ಎಂಬುದನ್ನು ಸಾಬೀತು ಮಾಡಲು ನಾವು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ತಂತ್ರಜ್ಞರನ್ನು ಹಾಗೂ ವಿಜ್ಞಾನಿಗಳು ಸೇರಿದಂತೆ ವಿದ್ಯುನ್ಮಾನ ಮತಯಂತ್ರದ ಪ್ರಾಮಾಣಿಕತೆ ಪ್ರಶ್ನಿಸಿದ ಪ್ರತಿಯೊಬ್ಬರಿಗೂ ಆಹ್ವಾನಿಸುತ್ತಿದ್ದೇವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಿಕೊಳ್ಳಲಾಗಿದೆ ಮತ್ತು ಈ ಯಂತ್ರವನ್ನು ದುರ್ಬಳಕೆ ಮಾಡಲು ಸಾಧ್ಯ ಎಂಬುದು ಇಡೀ ವಿಶ್ವಕ್ಕೆ ಗೊತ್ತು ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಅಲ್ಲದೆ ಈ ತಿಂಗಳು ನಡೆಯಲಿರುವ ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


