ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಿಂದ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ...

Published On :
ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಿಂದ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಜಯಲಲಿತಾ ಸಾವಿನ ಹಿನ್ನೆಲೆಯಲ್ಲಿ ಪ್ರಕರಣದಿಂದ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿತ್ತು. ಆದರೆ ಪ್ರಕರಣದಲ್ಲಿ ಅವರನ್ನು ಅಪರಾಧಿ ಎಂದು ಘೋಷಿಸಿ, ಅವರಿಂದ 100 ಕೋಟಿ ರುಪಾಯಿ ದಂಡ ವಸೂಲಿ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಅಲ್ಲದೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ಅವರನ್ನು ಅಪರಾಧಿಯೆಂದು ತೀರ್ಮಾನಿಸುವುದಿಲ್ಲವೆಂದು ಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ನ ಈ ನಡೆಯಿಂದಾಗಿ, ಪ್ರಕರಣದ ವಿಚಾರಣೆಗಾಗಿ ರಾಜ್ಯ ಸರ್ಕಾರ ಮಾಡಿದ್ದ ಸುಮಾರು 100 ಕೋಟಿ ರುಪಾಯಿ ಖರ್ಚು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹಿಂದಿರುಗುವ ನಿರೀಕ್ಷೆ ಹುಸಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Jayalalithaaಜಯಲಲಿತಾಅಕ್ರಮ ಆಸ್ತಿ ಪ್ರಕರಣsupreme courtಸುಪ್ರೀಂ ಕೋರ್ಟ್DA Casereview petitionಮೇಲ್ಮನವಿ ಅರ್ಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


