ಶಿವಕುಮಾರ ಸ್ವಾಮೀಜಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ
ಇತ್ತೀಚಿಗಷ್ಟೇ 110ನೇ ವಸಂತಕ್ಕೆ ಕಾಲಿಟ್ಟ ನಡೆದಾಡುವ ದೇವರು, ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರನ್ನು...

Published On :
ಬೆಂಗಳೂರು: ಇತ್ತೀಚಿಗಷ್ಟೇ 110ನೇ ವಸಂತಕ್ಕೆ ಕಾಲಿಟ್ಟ ನಡೆದಾಡುವ ದೇವರು, ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರನ್ನು ಕರ್ನಾಟಕ ಸರ್ಕಾರ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂಜ ಇದೇ ಮೊದಲ ಬಾರಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಲಾಗುತ್ತಿದ್ದು, ಏಪ್ರಿಲ್ 9ರಂದು ನಡೆಯಲಿರುವ ಮಹಾವೀರ ಜಯಂತಿ ಸಂದರ್ಭದಲ್ಲಿ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಮಹಿಳಾ ಪರವಾದ ಹೋರಾಟಗಳಿಗೆ ಹೆಸರುವಾಸಿಯಾಗಿರುವ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಮಲ್ಲಿಕಾ ಘಂಟಿ ಅವರನ್ನು 2016ನೇ ಸಾಲಿನ ಅಕ್ಕಮಹಾದೇವಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯನ್ನು ಏಪ್ರಿಲ್ 11 ರಂದು ನಡೆಯಲಿರುವ ಅಕ್ಕಮಹಾದೇವಿ ಜಯಂತಿ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಈ ಎರಡೂ ಪ್ರಶಸ್ತಿಗಳನ್ನು ಮೊದಲ ಬಾರಿಗೆ ನೀಡಲಾಗುತ್ತಿದ್ದು, ಎರಡೂ ಪ್ರಶಸ್ತಿಗಳು ತಲಾ 3 ಲಕ್ಷ ರು ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಮೀಣ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರ ಬದುಕನ್ನು ರೂಪಿಸುವಲ್ಲಿ ಶ್ರೀಗಳು ಮಾಡಿದ ಕೆಲಸ ಅಸಮಾನ್ಯವಾದದ್ದು. ಅವರ ಸೇವೆಯನ್ನು ಪರಿಗಣಿಸಿ ಮಹಾವೀರ ಶಾಂತಿ ಪ್ರಶಸ್ತಿಗೆ ಡಾ. ಶಿವಕುಮಾರ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
announcedಪ್ರಕಟShivakumara Swamijiಶಿವಕುಮಾರ ಸ್ವಾಮೀಜಿBhagwan Mahaveera Peace Awardಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


