ಅಮೆರಿಕದಲ್ಲಿ ಭಾರತೀಯನ ಸಾವು; ಅಧಿಕಾರಿಗಳಿಂದ ವರದಿ ಕೇಳಿದ ಸುಷ್ಮಾ ಸ್ವರಾಜ್
ದರೋಡೆಕೋರರ ಗುಂಡಿಗೆ ಬಲಿಯಾದ ಭಾರತೀಯ ವಿಕ್ರಮ್ ಜರ್ಯಾಲ್ ಹತ್ಯೆ ಪ್ರಕರಣ ಸಂಬಂದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿರುವುದಾಗಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ನವದೆಹಲಿ: ದರೋಡೆಕೋರರ ಗುಂಡಿಗೆ ಬಲಿಯಾದ ಭಾರತೀಯ ವಿಕ್ರಮ್ ಜರ್ಯಾಲ್ ಹತ್ಯೆ ಪ್ರಕರಣ ಸಂಬಂದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿರುವುದಾಗಿ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ವಾಷಿಂಗ್ಟನ್ ನ ಯಾಕಿಮಾ ಸಿಟಿಯಲ್ಲಿ ನಡೆದ ವಿಕ್ರಮ್ ಜರ್ಯಾಲ್ ಹತ್ಯೆ ಸಂಬಂಧ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿದ್ದು, ಮೃತ ವಿಕ್ರಮ್ ಜರ್ಯಾಲ್ ಕುಟುಂಬಕ್ಕೆ ಅಗತ್ಯ ನೆರವು ನೀಡುವಂತೆ ಸೂಚಿಸಲಾಗಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಅಂತೆಯೇ ಮೃತ ವಿಕ್ರಮ್ ಜರ್ಯಾಲ್ ಮೃತ ದೇಹವನ್ನು ಭಾರತಕ್ಕೆ ವಾಪಸ್ ತರಲು ಸಕಲ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಪ್ರಸ್ತುತ ಅಮೆರಿಕದ ತನಿಖಾ ಸಂಸ್ಥೆಗಳೊಂದಿಗೆ ತಾವು ನಿರಂತರ ಸಂಪರ್ಕದಲ್ಲಿದ್ದು, ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇವೆ. ತನಿಖಾ ಅಧಿಕಾರಿಗಳು ಘಟನಾ ಪ್ರದೇಶದ ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ವಿಡಿಯೋಗಳನ್ನು ಕಲೆಹಾಕಿದ್ದಾರೆ. ಅದರಲ್ಲಿ ಬಹುಶಃ ಏನಾದರೂ ಅಂಶಗಳು ಬೆಳಕಿಗೆ ಬರಬಹುದು. ವಿಡಿಯೋದಲ್ಲಿ ದುಷ್ಕರ್ಮಿಗಳ ಕುರಿತು ಏನಾದರೂ ಸುಳುಹು ದೊರೆಯಬಹುದು ಎಂದು ಹೇಳಿದ್ದಾರೆ. ಪ್ರಸ್ತುತ ಅಧಿಕಾರಿಗಳು ವಿಕ್ರಮ್ ಅವರ ಕುಟುಂಬಸ್ಥರೊಂದಿಗೆ ಇದ್ದು, ಅಮೆರಿಕ ಪೊಲೀಸರ ತನಿಖೆಯಲ್ಲಿ ನೆರವು ನೀಡುತ್ತಿದ್ದಾರೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಅಂತೆಯೇ ತಮಗೆ ವಿಕ್ರಮ್ ಅವರ ಸಹೋದರ ಟ್ವಿಟರ್ ಮೂಲಕ ಮಾಹಿತಿ ತಿಳಿಸಿದ್ದು, ಮಾಹಿತಿ ತಿಳಿದ ಕೂಡಲೇ ರಾಯಭಾರ ಕಚೇರಿ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿರುವುದಾಗಿಯೂ ಸುಷ್ಮಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


