ಜಿಎಸ್ ಟಿ ಮಸೂದೆಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ
ಬಹು ನಿರೀಕ್ಷಿತ ಎಕರೂಪದ ತೆರಿಗೆ ನೀತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಅಂಕಿತ ಹಾಕಿದ್ದಾರೆ.

ನವದೆಹಲಿ: ಬಹು ನಿರೀಕ್ಷಿತ ಎಕರೂಪದ ತೆರಿಗೆ ನೀತಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಅಂಕಿತ ಹಾಕಿದ್ದಾರೆ.
ಸಂಸತ್ ನ ಉಭಯ ಕಲಾಪಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕೇಂದ್ರ ಸರ್ಕಾರದ ಉದ್ದೇಶಿತ ಜಿಎಸ್ ಟಿ ಮಸೂದೆ ಹಲವು ತಿದ್ದುಪಡಿಗಳೊಂದಿಗೆ ಉಭಯ ಸದನಗಳ ಅನುಮೋದನೆ ಪಡೆದಿತ್ತು. ಇದೀಗ ಈ ಮಹತ್ವಾಕಾಂಕ್ಷಿ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದು, ಇನ್ನು ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಲಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಇದೇ ಜುಲೈ 1ರಿಂದ ಜಿಎಸ್ ಟಿ ಮಸೂದೆ ದೇಶಾದ್ಯಂತ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.
ಕಳೆದ ಮಾರ್ಚ್ 29ರಂದು ಲೋಕಸಭೆಯಲ್ಲಿ ಸತತ 8 ಗಂಟೆಗಳ ಕಾಲ ಚರ್ಚೆಗೀಡಾಗಿದ್ದ ಜಿಎಸ್ ಟಿ ಮಸೂದೆಯನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದರು. ಬಳಿಕ ಏಪ್ರಿಲ್ 6ರಂದು ರಾಜ್ಯಸಭೆಯಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ (ಸಿ.ಜಿ.ಎಸ್.ಟಿ) ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ (ರಾಜ್ಯಗಳಿಗೆ ಪರಿಹಾರ ನೀಡುವ ಮಸೂದೆ)-2017 ಗಳನ್ನು ಅಂಗೀಕರಿಸಲಾಗಿತ್ತು.
ಕೇಂದ್ರ ಮತ್ತು ಏಕೀಕೃತ ಜಿಎಸ್ ಟಿ ಮಸೂದೆಯು ದೇಶವ್ಯಾಪಿ ಏಕರೂಪದ ದಂಡ ಮತ್ತು ತೆರಿಗೆ ಸಂಗ್ರಹಿಸುವ ಕಾನೂನಾಗಿದ್ದು, ಜಿಎಸ್ ಟಿ ಪರಿಹಾರ ಮಸೂದೆಯೂ ಜಿಎಸ್ ಟಿ ಜಾರಿ ಬಳಿಕ ರಾಜ್ಯ ಸರ್ಕಾರಗಳಿಗಾಗುವ ನಷ್ಟವನ್ನು ಭರಿಸುವ ಮತ್ತು ಪರಿಹಾರ ನೀಡುವ ಮಸೂದೆಯಾಗಿದೆ. ಇದು ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


