ಮಣಿಪುರದಲ್ಲಿ ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ ಮತ್ತು ೧೪ ಕೌನ್ಸಲರ್ ಗಳು
ಮಣಿಪುರದ ಕಾಂಗ್ರೆಸ್ ಶಾಸಕ ಜಿನಸುಹವು ಜೌ ಮತ್ತು ಪಕ್ಷದ ೧೪ ಕೌನ್ಸಲರ್ ಗಳು ಕಾಂಗ್ರೆಸ್ ತೊರೆದು ಆಡಳಿತ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.

Published On :
ಇಂಫಾಲ್: ಮಣಿಪುರದ ಕಾಂಗ್ರೆಸ್ ಶಾಸಕ ಜಿನಸುಹವು ಜೌ ಮತ್ತು ಪಕ್ಷದ ೧೪ ಕೌನ್ಸಲರ್ ಗಳು ಕಾಂಗ್ರೆಸ್ ತೊರೆದು ಆಡಳಿತ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಬಿಜೆಪಿ ಪಕ್ಷದ ಕಚೇರಿಯಲ್ಲಿ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಇನ್ನೂ ಹೆಚ್ಚಿನ ಕಾಂಗ್ರೆಸ್ ಶಾಸಕರು ಪಕ್ಷ ಸೇರಲಿದ್ದಾರೆ ಎಂದಿದ್ದಾರೆ.
ಜಿನಸುಹವು ಸಿಂಘಾಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಇನ್ನು ಕಾಂಗ್ರೆಸ್ ಪಕ್ಷ ತೊರೆದ ಕೌನ್ಸಲರ್ ಗಳು ಚಾಂದೇಲ್ ನ ಸ್ವಾಯತ್ತ ಜಿಲ್ಲಾ ಕೌನ್ಸಿಲ್ ನ ಸದಸ್ಯರು.
ಈ ಹಿಂದೆ ಬಿಜೆಪಿ ಅಧಿಕಾರ ಸ್ವೀಕರಿಸಿದಾಗ ಕಾಂಗ್ರೆಸ್ ಶಾಸಕ ಟಿ ಶ್ಯಾಮ್ ಕುಮಾರ್ ಬಿಜೆಪಿ ಸೇರಿದ್ದರು. ಅವರು ಸಂಪುಟ ಸಚಿವರಾಗಿಯೂ ಪ್ರಮಾಣ ವಚನ ಸ್ವೀಕರಿಸಿದ್ದರು.
೬೦ ಕ್ಷೇತ್ರಗಳ ವಿಧಾನಸಭೆಯಲ್ಲಿ ಬಿಜೆಪಿ ಕೇವಲ ೨೧ ಕ್ಷೇತ್ರಗಳನ್ನು ಗೆದ್ದಿದ್ದರೂ, ಇತರ ಸಣ್ಣ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಿದೆ. ಕಾಂಗ್ರೆಸ್ ೨೮ ಸ್ಥಾನಗಳನ್ನು ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


