ಪ್ರಧಾನ ಸುದ್ದಿ

ಲಂಡನ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಬಂಧನ

ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ...

ಲಂಡನ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಬಂಧನ
ವಿಜಯ್ ಮಲ್ಯ
Published On :
ನವದೆಹಲಿ: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್‌ ಮಲ್ಯ ಅವರನ್ನು ಮಂಗಳವಾರ ಸ್ಕಾಟ್ ಲ್ಯಾಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ವಿಜಯ್ ಮಲ್ಯ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವೆಸ್ಟ್ ಮಿನಿಸ್ಟರ್ಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಬಳಿಕ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಕೋರ್ಟ್ ತನ್ನ ನಿರ್ಧಾರ ಪ್ರಕಟಿಸಲಿದೆ.
ಕಳೆದ ಫೆಬ್ರವರಿಯಲ್ಲಿ ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತ ಮಾಡಿದ್ದ ಮನವಿಯನ್ನು ಬ್ರಿಟಿಷ್ ಸರ್ಕಾರ ಪುರಷ್ಕರಿಸಿದ್ದು, ಅದನ್ನು ವೆಸ್ಟ್ ಮಿನಿಸ್ಟರ್ಸ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ರವಾನಿಸಿತ್ತು.
ಭಾರತ–ಬ್ರಿಟನ್‌ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದ(ಎಂಎಲ್‌ಎಟಿ)ದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಬ್ರಿಟನ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಮನವಿ ಮಾಡಿತ್ತು. ಅದನ್ನು ಬ್ರಿಟನ್ ಸರ್ಕಾರ ಪುರಷ್ಕರಿಸಿತ್ತು. ಅಲ್ಲದೆ ಮಲ್ಯ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸುವ ಬಗ್ಗೆ ಲಂಡನ್ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿತ್ತು.
9 ಸಾವಿರ ಕೋಟಿ ರುಪಾಯಿ ಸಾಲ ಮಾಡಿಕೊಂಡು ದೇಶದಿಂದ ಪಲಾಯನ ಮಾಡಿರುವ ಉದ್ಯಮಿ ವಿಜಯ್ ಮಲ್ಯ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಹಾಗೂ ಕೋರ್ಟ್ ಗಳಿಂದ ಹಲವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಆದರೆ ಇದೀಗ ಮಲ್ಯ ಅವರನ್ನು ದೇಶಕ್ಕೆ ಕರೆತರುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.