ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ 10 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸುಪ್ರೀಂ ಅಸ್ತು!
ಮಹತ್ವದ ಬೆಳವಣಿಗೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ಸುಪ್ರಿಂ ಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಜೋಶಿ ಸೇರಿದಂತೆ ಇತರೆ 10 ಮಂದಿ ನಾಯಕರ ವಿರುದ್ಧದ ಕ್ರಿಮಿನಲ್ ಆರೋಪದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕರಸೇವಕರೊಂದಿಗೆ 13 ಮಂದಿ ಬಿಜೆಪಿ ನಾಯಕರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಅಂತೆಯೇ ದಶಕಗಳ ಹಿಂದಿನ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಇನ್ನೆರಡು ವರ್ಷದಲ್ಲಿ ವಿಚಾರಣೆ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದೆ. ಅಷ್ಟು ಮಾತ್ರವಲ್ಲದೇ ಲಖನೌ ಮತ್ತು ರಾಯ್ ಬರೇಲಿಯಲ್ಲಿ ನಡೆಯುತ್ತಿರುವ ವಿಚಾರಣೆ ಮುಂದುವರೆಯಲಿದ್ದು, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ. ಇದೇ ವೇಳೆ ಇನ್ನು ನಾಲ್ಕು ವಾರಗಳಲ್ಲಿ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಬೇಕು ಎಂದೂ ಸೂಚಿಸಿದೆ.
ಪ್ರಕರಣ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪಿನಾಕಿ ಚಂದ್ರ ಘೋಷ್ ಮತ್ತು ಆರ್. ಎಫ್. ನಾರಿಮನ್ ಅವರ ಪೀಠ, ವಿಚಾರಣೆ ಆರಂಭವಾದ ಬಳಿಕ ಯಾವುದೇ ಕಾರಣಕ್ಕೂ ನ್ಯಾಯಾಧೀಶರ ವರ್ಗಾವಣೆ ಮಾಡಬಾರದು ಎಂದೂ ಆದೇಶಿಸಿದೆ. ಅಂತೆಯೇ ಸಿಬಿಐ ಅಧಿಕಾರಿಗಳ ಪ್ರಕರಣ ಸಂಬಂಧ ಲಖನೌ ಕೋರ್ಟ್ ಗೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ನಿರ್ದೇಶನ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


