ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!
ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಚೆನ್ನೈ: ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಚೆನ್ನೈನಲ್ಲಿ ಇಂದು ತಮ್ಮ ಬೆಂಬಲಿಗ ಶಾಸಕರ ತುರ್ತು ಸಭೆ ಕರೆದಿರುವ ದಿನಕರನ್ ಸಭೆಗೆ ಹಾಜರಾಗುವಂತೆ ಶಾಸಕರಿಗೆ, ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಿಗೆ ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆ ಬಳಿಕ ಶಶಿಕಲಾ ಬಣದ 7 ಶಾಸಕರು ದಿನಕರನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಚರ್ಚೆ ಬಳಿಕ ದಿನಕರನ್ ತುರ್ತು ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷದ ಕಾರ್ಯದರ್ಶಿ ಶಶಿಕಲಾನೇಮಕ ಕಾನೂನು ಬಾಹಿರ ಎಂದು ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಎಐಎಡಿಎಂಕೆ ಪತ್ರ
ಏತನ್ಮಧ್ಯೆ ಸಂಧಾನ ಯಶಸ್ವಿಯಾದ ಬೆನ್ನಲ್ಲೇ ಎಐಎಡಿಎಂಕೆ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ಆಯ್ಕೆಯನ್ನು ಕಾನೂನು ಬಾಹಿರ ಎಂದು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


