ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಕನ್ನಡಿಗ ವಿವೇಕ್ ಮೂರ್ತಿ ರಾಜಿನಾಮೆ
ಅಮೆರಿಕದ ಸರ್ಜನ್ ಜನರಲ್ ಆಗಿದ್ದ ಕನ್ನಡಿಗ ಮಂಡ್ಯ ಮೂಲದ ಡಾ. ವಿವೇಕ್ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

Published On :
ವಾಷಿಂಗ್ಟನ್: ಅಮೆರಿಕದ ಸರ್ಜನ್ ಜನರಲ್ ಆಗಿದ್ದ ಕನ್ನಡಿಗ ಮಂಡ್ಯ ಮೂಲದ ಡಾ. ವಿವೇಕ್ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಹಿಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ವಿವೇಕ್ ಮೂರ್ತಿ ಅವರನ್ನು ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಆಯ್ಕೆ ಮಾಡಿದ್ದರು. ಆದರೆ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಹುದ್ದೆ ತ್ಯಜಿಸುವಂತೆ ವಿವೇಕ್ ಮೂರ್ತಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅವರು ಇಂದು ರಾಜಿನಾಮೆ ನೀಡಿದ್ದಾರೆ.
ಅಮೆರಿಕ ಸಾರ್ವಜನಿಕ ಆರೋಗ್ಯ ಸೇವೆ ಆಯೋಗದ ಮುಖ್ಯಸ್ಥರ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ವಿವೇಕ್ ಮೂರ್ತಿಗೆ ಸೂಚಿಸಲಾಗಿದೆ ಎಂದು ನಿನ್ನೆ ಅಮೆರಿಕದ ಆರೋಗ್ಯ ಮತ್ತು ಮಾನವ ಸೇವೆಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿತ್ತು.
ಮೂರ್ತಿ ಅವರನ್ನು ಸರ್ಜನ್ ಜನರಲ್ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದ್ದು, ಆಯೋಗದ ಸದಸ್ಯರಾಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಲಾಗಿದೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮರ ಆಪ್ತ ಸರ್ಜನ್ ಜನರಲ್' ಆಗಿಯೂ ನಿಯೋಜಿತರಾಗಿದ್ದ ವಿವೇಕ್ ಮೂರ್ತಿ ಅವರಿಗೆ ಭಾರತೀಯ ಯೋಗ ಪದ್ಧತಿಯಲ್ಲಿ ಅಪಾರ ಗೌರವ ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


