ಪ್ರಧಾನ ಸುದ್ದಿ

ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ, 26 ಸಿಆರ್ ಪಿಎಫ್ ಯೋಧರು ಹುತಾತ್ಮ

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸೋಮವಾರ ನಡೆದ ಎನ್ ಕೌಂಟರ್ ವೇಳೆ 24 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.

ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸ, 26 ಸಿಆರ್ ಪಿಎಫ್ ಯೋಧರು ಹುತಾತ್ಮ
ಗಾಯಾಳು ಯೋಧನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿರುವುದು.
Published On :
ರಾಯಪುರ್: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸೋಮವಾರ ನಡೆದ ಎನ್ ಕೌಂಟರ್ ವೇಳೆ 26 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ.
ಇಂದು ಮಧ್ಯಾಹ್ನ 12.25ರ ಸುಮಾರಿಗೆ ನಕ್ಸಲ್ ಪೀಡಿತ ಬುರ್ಕಾಪಾಲ್- ಚಿಂತಗುಫ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ನಕ್ಸಲರ ಗುಂಡಿನ ದಾಳಿಗೆ 26 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಗಾಯಾಳುಗಳ ಪೈಕಿ ಏಳು ಮಂದಿ ಯೋಧರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಸುಮಾರು 300 ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯ ಬಳಿಕ ಸಿಆರ್ ಪಿಎಫ್ ಯೋಧರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.
ಈ ಮುಂಚೆ ಎನ್ ಕೌಂಟರ್ ನಲ್ಲಿ ಆರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಛತ್ತೀಸ್ ಗಢ ವಿಶೇಷ ಪೊಲೀಸ್ ಮಹಾ ನಿರ್ದೇಶಕ ಡಿಎಂ ಅವಸ್ಥಿ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದರು. ಆದರೆ ಇದೀಗ ಬಂದ ವರದಿಗಳ ಪ್ರಕಾರ ಎನ್ ಕೌಂಟರ್ ನಲ್ಲಿ 26 ಯೋಧರು ಹುತಾತ್ಮರಾಗಿದ್ದಾರೆ.
ಘಟನಾ ಸ್ಥಳಕ್ಕೆ ಈಗಾಗಲೇ ಹೆಲಿಕಾಪ್ಟರ್ ರವಾನಿಸಲಾಗಿದ್ದು, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.