ಆ.15ರಿಂದ 'ಇಂದಿರಾ ಕ್ಯಾಂಟೀನ್' ಆರಂಭ, ಆಹಾರ ಗುಣಮಟ್ಟದಲ್ಲಿ ರಾಜಿ ಇಲ್ಲ: ಸಿಎಂ
ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಆಗಸ್ಟ್ 15ರಿಂದ ಆರಂಭವಾಗಲಿದೆ....

Published On :
ಬೆಂಗಳೂರು: ಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಈ ಸಂಬಂಧ ಇಂದು ವಿಧಾನಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಆಗಸ್ಟ್ 15ರಂದು ಬೆಂಗಳೂರಿನ ಎಲ್ಲಾ 198 ವಾರ್ಡ್ಗಳಲ್ಲಿ ಏಕ ಕಾಲಕ್ಕೆ ಇಂದಿರಾ ಕ್ಯಾಂಟಿನ್ ಆರಂಭಿಸುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ ಎಂದರು. ಅಲ್ಲದೆ ಆಹಾರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇಂದಿರಾ ಕ್ಯಾಂಟಿನ್ ತೆರೆಯಲು ಸಮಿತಿಗಳನ್ನು ರಚಿಸಲಾಗಿದ್ದು, ಈಗಾಗಲೇ ಎಲ್ಲಾ ವಾರ್ಡ್ ಗಳಲ್ಲಿ ಎರಡರಿಂದ ಮೂರು ಜಾಗಗಳನ್ನು ಗುರುತಿಸಲಾಗಿದ್ದು, 140 ವಾರ್ಡ್ ಗಳಲ್ಲಿ ಕ್ಯಾಂಟೀನ್ ಗಾಗಿ ಜಾಗ ಅಂತಿಮಗೊಳಿಸಲಾಗಿದೆ. ಕೇಂದ್ರಿಕೃತ ಅಡುಗೆ ಮನೆ ಮೂಲಕ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಅಡುಗೆ ಮನೆ ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಪ್ರತಿ ಇಂದಿರಾ ಕ್ಯಾಂಟೀನ್ ಗೆ 7.5 ಲಕ್ಷ ರುಪಾಯಿ ವೆಚ್ಚವಾಗುತ್ತಿದ್ದು, ಲ್ಯಾಂಡ್ ಆರ್ಮಿಯಿಂದ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಅಡುಗೆ ಟೆಂಡರ್ ಗೆ ಇಸ್ಕಾನ್ ನನ್ನು ಪರಿಗಣಿಸಿಲ್ಲ. ಅವರು ಅಡುಗೆಗೆ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬಳಸುವುದಿಲ್ಲ. ಹೀಗಾಗಿ ಅಡುಗೆ ಏಕತಾನತೆಯಿಂದ ಕೂಡಿರುತ್ತದೆ ಎಂದು ಸಿಎಂ ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್ ನಲ್ಲಿ ಐದು ರುಪಾಯಿಗೆ ತಿಂಡಿ ಹಾಗೂ 10 ರುಪಾಯಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


