ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೋ ಹಾಕಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವಂತೆ ಮುಖ್ಯಮಂತ್ರಿ....

Published On :
ಚಾಮರಾಜನಗರ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಗುಂಡ್ಲುಪೇಟೆಯ ಮಹದೇವ ಪ್ರಸಾದ್ ನಗರದಲ್ಲಿ ನಡೆದ ಮತದಾರರಿಗೆ ಕೃತಜ್ಞತೆ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಏಪ್ರಿಲ್ 29ರಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ನಿನ್ನೆಯಷ್ಟೆ ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಸಂಬಂಧ ಆದೇಶ ಹೊರಡಿಸಿತ್ತು. ಇದರಿಂದ ಬಸವಣ್ಣನ ತವರು ರಾಜ್ಯವಾದ ಕರ್ನಾಟಕದಲ್ಲೂ ಇಂಥ ಕ್ರಮಕೈಗೊಳ್ಳಬೇಕು ಎಂಬ ಕೂಗು ಕೇಳಿ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


