ಪ್ರಧಾನ ಸುದ್ದಿ

ಚುನಾವಣಾ ಆಯೋಗಕ್ಕೆ ಲಂಚ ಆರೋಪ: ಟಿಟಿವಿ ದಿನಕರನ್ 5 ದಿನ ಪೊಲೀಸ್ ವಶಕ್ಕೆ

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....

ಚುನಾವಣಾ ಆಯೋಗಕ್ಕೆ ಲಂಚ ಆರೋಪ: ಟಿಟಿವಿ ದಿನಕರನ್ 5 ದಿನ ಪೊಲೀಸ್ ವಶಕ್ಕೆ
ಟಿಟಿವಿ ದಿನಕರನ್
Published On :
ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ಐದು ದಿನಗಳ ಕಾಲ ದೆಹಲಿ ಪೊಲೀಸ್ ವಶಕ್ಕೆ ನೀಡಲಾಗಿದೆ.
ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಂತರ ಮಂಗಳವಾರ ಟಿಟಿವಿ ದಿನಕರನ್ ಅವರನ್ನು ಬಂಧಿಸಿದ ದೆಹಲಿ ಪೊಲೀಸರು ಇಂದು ತೀಸ್ ಹಜಾರಿ ಕೋರ್ಟ್ ಗೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಪೂನಂ ಚೌಧರಿ ಅವರು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಇದೇ ವೇಳೆ ದಿನಕರನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ದೆಹಲಿ ಪೊಲೀಸರು ದಿನಕರನ್,  ಸುಖೇಶ್ ಚಂದ್ರ ಶೇಖರ್ ನನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸಿ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇನ್ನು ದಿನಕರನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಎಏಐಎಡಿಎಂಕೆ(ಅಮ್ಮಾ) ವಕ್ತಾರ ಪುಗಳೇಂದಿ ಈ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಎಲ್ಲಾ ವ್ಯವಹಾರಗಳನ್ನು ದಿನಕರನ್ ನಿಷ್ಠೆಯಿಂದ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಅವರಿಗೆ ಜಾಮೀನು ಪಡೆಯಲು ನಾವು ಅಪೀಲು ಹೋಗುತ್ತೇವೆ ಎಂದು ಹೇಳಿದ್ದಾರೆ.
ಎಲ್ಲಾ ಆರೋಪಗಳು ದಿನಕರನ್ ವಿರುದ್ಧವೇ ಇವೆ. ಆತಕನ ವಿರುದ್ಧ ಏಕೆ ಯಾವ ಕ್ರಮಗಳನ್ನು ಜರುಗಿಸಿಲ್ಲ ಎಂದು ನ್ಯಾಯಾಧೀಶ ಪೂನಂ ಚೌಧುರಿ ದೆಹಲಿ ಕ್ರೈಂ ಬ್ರಾಂಚ್ ನ ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಸುಖೇಶ್ ಚಂದ್ರಶೇಖರ್ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.