ಕುಲಭೂಷಣ್ ಜಾಧವ್ ಆರೋಗ್ಯದ ಬಗ್ಗೆ ಪ್ರಮಾಣಪತ್ರ ನೀಡಿ: ಪಾಕ್ ಗೆ ಭಾರತ
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ...

Published On :
ನವದೆಹಲಿ: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಆರೋಗ್ಯದ ಕುರಿತು ಪ್ರಮಾಣಪತ್ರ ನೀಡುವಂತೆ ಭಾರತ ಗುರುವಾರ ಪಾಕಿಸ್ತಾನಕ್ಕೆ ಕೇಳಿಕೊಂಡಿದೆ.
ಗೂಢಚಾರಿಕೆ ನಡೆಸಿದ ಆರೋಪದ ಮೇಲೆ ಕಳೆದ ಒಂದು ವರ್ಷದಿಂದ ಪಾಕಿಸ್ತಾನದ ವಶದಲ್ಲಿರುವ ಕುಲಭೂಷಣ್ ಜಾಧವ್ ಅವರ ಆರೋಗ್ಯದ ವಿಚಾರ ಭಾರತಕ್ಕೆ ತುಂಬಾ ಮಹತ್ವದ್ದಾಗಿದ್ದು, ಆ ಕುರಿತು ಪ್ರಮಾಣ ಪತ್ರ ನೀಡುವಂತೆ ಪಾಕಿಸ್ತಾನಕ್ಕೆ ಕೇಳಿಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಗ್ಲಾಯ್ ಅವರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪಾಕಿಸ್ತಾನದಲ್ಲಿರುವ ಜಾಧವ್ ಅವರನ್ನು ನಾವು ನೋಡಿಲ್ಲ ಮತ್ತು ಭೇಟಿ ಮಾಡಿಲ್ಲ. ಹೀಗಾಗಿ ಜಾಧವ್ ಆರೋಗ್ಯದ ಸ್ಥಿತಿಯ ಕುರಿತು ಆತಂಕ ವ್ಯಕ್ತವಾಗುತ್ತಿದೆ ಎಂದಿದ್ದಾರೆ.
ಈ ಹಿಂದೆಯೂ ನಾವು ಜಾಧವ್ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಪಾಕಿಸ್ತಾನಕ್ಕೆ ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ. ಈಗ ಮತ್ತೆ ಇಸ್ಲಾಮಾಬಾದ್ ನಲ್ಲಿರುವ ಭಾರತದ ಹೈಕಮಿಷನರ್ ಜಾಧವ್ ಆರೋಗ್ಯ ಸ್ಥಿತಿ ಬಗ್ಗೆ ವರದಿ ನೀಡವಂತೆ ಮನವಿ ಮಾಡಿದ್ದು, ಪಾಕ್ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ಬಗ್ಲಾಯ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


