ಪಂಜಾಬ್ ಎಎಪಿ ಮೇಲುಸ್ತುವಾರಿ ಸ್ಥಾನದಿಂದ ಸಂಜಯ್ ಸಿಂಗ್ ರಾಜೀನಾಮೆ
ದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಒಂದು ದಿನದ ನಂತರ ಹಿರಿಯ ಮುಖಂಡ ಸಂಜಯ್ ಸಿಂಗ್ ಪಂಜಾಬ್ ರಾಜ್ಯದ ಪಕ್ಷದ ಉಸ್ತುವಾರಿ ಸ್ಥಾನದಿಂದ ರಾಜೀನಾಮೆ

Published On :
ನವದೆಹಲಿ: ದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಒಂದು ದಿನದ ನಂತರ ಹಿರಿಯ ಮುಖಂಡ ಸಂಜಯ್ ಸಿಂಗ್ ಪಂಜಾಬ್ ರಾಜ್ಯದ ಪಕ್ಷದ ಉಸ್ತುವಾರಿ ಸ್ಥಾನದಿಂದ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ಎಎಪಿ ಪಕ್ಷದ ಸಹ ಉಸ್ತುವಾರಿ ದುರ್ಗೇಶ್ ಪಾಠಕ್ ಕೂಡ ರಾಜೀನಾಮೆ ನೀಡಿದ್ದಾರೆ. ಈರ್ವರೂ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
"ಪಂಜಾಬ್ ರಾಜ್ಯದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದ್ ಕೇಜ್ರಿವಾಲ್ ಅವರಿಗೆ ಕಳುಹಿಸಿದ್ದೇನೆ. ದುರ್ಗೇಶ್ (ಪಾಠಕ್) ಕೂಡ ರಾಜ್ಯದ ಸಹ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದಿದ್ದಾರೆ" ಎಂದು ಸಿಂಗ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
ದೆಹಲಿ ಮುನ್ಸಿಪಲ್ ಚುನಾವಣೆಯ ೨೭೦ ಕ್ಷೇತ್ರಗಳಲ್ಲಿ ಬಿಜೆಪಿ ೧೮೧ ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್ ಪಕ್ಷ ೩೦ ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಎಎಪಿ ಕೇವಲ ೪೮ ವಾರ್ಡ್ ಗಳಲ್ಲಿ ಗೆದ್ದಿತ್ತು.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿಯೂ ನಿರೀಕ್ಷೆಯಂತೆ ಸಾಧನೆ ಮಾಡಲು ಎಎಪಿ ಪಕ್ಷಕ್ಕೆ ಸಾಧ್ಯವಾಗಿರಲಿಲ್ಲ. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರವನ್ನು ಗೆಲ್ಲದ ಎಎಪಿ ದೆಹಲಿ ಉಪಚುನಾವಣೆಯಲ್ಲಿಯೂ ಸೋಲು ಕಂಡಿತ್ತು. ಈಗ ಎಎಪಿ ವರ್ಚಸ್ಸು ಕುಸಿದಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಎದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


