ಪ್ರಧಾನ ಸುದ್ದಿ

ಕೇಜ್ರಿವಾಲ್ ಗೆ ತೀವ್ರ ಮಧುಮೇಹ, ಚಿಕಿತ್ಸೆಗಾಗಿ ಬೆಂಗಳೂರಿಗೆ ಬರಲಿದ್ದಾರೆ ದೆಹಲಿ ಸಿಎಂ

ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೈಸರ್ಗಿಕ ಚಿಕಿತ್ಸೆಗಾಗಿ...

ಕೇಜ್ರಿವಾಲ್ ಗೆ ತೀವ್ರ ಮಧುಮೇಹ, ಚಿಕಿತ್ಸೆಗಾಗಿ ಬೆಂಗಳೂರಿಗೆ ಬರಲಿದ್ದಾರೆ ದೆಹಲಿ ಸಿಎಂ
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೈಸರ್ಗಿಕ ಚಿಕಿತ್ಸೆಗಾಗಿ ಮತ್ತೆ ಬೆಂಗಳೂರಿಗೆ ಬರುತ್ತಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಕೇಜ್ರಿವಾಲ್ ಅವರು ನಿನ್ನೆ ದೆಹಲಿಗೆ ವಾಪಸ್ ಆಗಿದ್ದು, ಫೆಬ್ರವರಿ 7 ರಂದು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
ಪಂಜಾಬ್ ಮತ್ತು ಗೋವಾ ವಿಧಾನ ಸಭಾ ಚುನಾವಣೆಯ ಮತದಾನ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ಬರುತ್ತಿದ್ದಾರೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರವಾಗಿ ಏರಿಕೆಯಾಗಿದೆ, ದಿನಕ್ಕೆ 3 ಸಲ ಇನ್ಸ್ಸುಲಿನ್ ತೆಗೆದುಕೊಳ್ಳುತ್ತಿದ್ದಾರೆ. ಆದರೂ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿಲ್ಲ. ಜತೆಗೆ ಜ್ವರದಿಂದಲೂ ಸಹ ಅವರು ಬಳುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ನೈಸರ್ಗಿಕ ಚಿಕಿತ್ಸೆ ಪಡೆಯಲಿದ್ದಾರೆ. ಸುಮಾರು 12 ರಿಂದ 14 ದಿನ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಕಳೆದ ವರ್ಷ ಜನವರಿಯಲ್ಲಿ ಕೆಮ್ಮು ಮತ್ತು ಮಧುಮೇಹ ಸಮಸ್ಯೆಯ ಪರಿಹಾರಕ್ಕಾಗಿ ಕೇಜ್ರಿವಾಲ್ ಬೆಂಗಳೂರಿನಲ್ಲಿ 12 ದಿನಗಳ ನೈಸರ್ಗಿಕ ಚಿಕಿತ್ಸೆ ಪಡೆದಿದ್ದರು. ಜತೆಗೆ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಂಟಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.