ಯಾಸಿನ್ ಮಲಿಕ್ ಬಂಧನ; ಗೃಹ ಬಂಧನದಲ್ಲಿ ಮೀರ್ವೈಜ್
ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಯಾಸಿನ್ ಮಲಿಕ್ ಅವರನ್ನು ಗುರುವಾರ ಬಂಧಿಸಲಾಗಿದ್ದು, ಹುರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮೀರ್ವೈಜ್ ಉಮರ್ ಫಾರೂಕ್

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಅಧ್ಯಕ್ಷ ಯಾಸಿನ್ ಮಲಿಕ್ ಅವರನ್ನು ಗುರುವಾರ ಬಂಧಿಸಲಾಗಿದ್ದು, ಹುರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮೀರ್ವೈಜ್ ಉಮರ್ ಫಾರೂಕ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರದ ಕೇಂದ್ರ ಭಾಗದಲ್ಲಿರುವ ಸಾರೈ ಬಾಲಾದಿಂದ ಲಾಲ್ ಚೌಕ್ ವರೆಗೆ ಪ್ರತಿಭಟನಾ ನಡಿಗೆಗೆ ಮಲಿಕ್ ಮತ್ತು ಅವರ ಬೆಂಬಲಿಗರು ಪ್ರಯತ್ನಿಸಿದಾಗ ಅವರನ್ನು ಬಂಧಿಸಲಾಗಿದೆ.
ಇದಕ್ಕೂ ಮುಂಚಿತವಾಗಿ ವಿಶ್ವ ಸಂಸ್ಥೆಯ ಮಿಲಿಟರಿ ಪರಿವೀಕ್ಷಕರ ತಂಡದ ಮುಖ್ಯ ಕಚೇರಿಯೆಡೆಗೆ ಪ್ರತಿಭಟನೆ ಕೊಂಡೊಯ್ಯುತ್ತಿದ್ದ ಮೀರ್ವೈಜ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.
ಪ್ರತ್ಯೇಕವಾದಿ ಬಣಗಳು ಕರೆದಿರುವ ಪ್ರತಿಭಟನೆಗಳನ್ನು ನಿಲ್ಲಿಸಲು ಶ್ರೀನಗರದ ಹಲವೆಡೆ ಅಧಿಕಾರಿಗಳು ನಿರ್ಬಂಧಗಳನ್ನು ಹೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹುರಿಯತ್ ಕಾನ್ಫರೆನ್ಸ್Yasin Malikಯಾಸಿನ್ ಮಲಿಕ್JKLFHuriyat ConferenceMirwaiz Umar Farooqಮೀರ್ವೈಜ್ ಉಮರ್ ಫಾರೂಕ್ಜೆಕೆಎಲ್ಎಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


