ಏರೋ ಇಂಡಿಯಾ: ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ರಾಜ್ಯದ ಸಾಮರ್ಥ್ಯ ಪ್ರದರ್ಶನ
ಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ....

Published On :
ಬೆಂಗಳೂರು: ಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಎರಡು ದಿನಗಳ "ಮೇಕ್ ಇನ್ ಇಂಡಿಯಾ-ಕರ್ನಾಟಕ' ಸಮ್ಮೇಳನ ಆಯೋಜಿಸಿದೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗಿರುವ ಅವಕಾಶ, ಕರ್ನಾಟಕದ ಕೈಗಾರಿಕೆ ಬೆಳವಣಿಗೆ, ಉತ್ಪಾದನಾ ವಲಯದ ಸಾಧನೆ, ಕೌಶಲ್ಯತೆ ಅನಾವರಣಗೊಳಿಸುವ ಉದ್ದೇಶದದಿಂದ ಫೆ.13 ಮತ್ತು 14 ರಂದು ನಗರದಲ್ಲಿ "ಮೇಕ್ ಇನ್ ಇಂಡಿಯಾ-ಕರ್ನಾಟಕ' ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣ ಮತ್ತು ರಾಜ್ಯದಲ್ಲಿ ತಯಾರಿಕಾ ಕ್ಷೇತ್ರದ ಸ್ವಾಯತ್ತತೆಯ ವೃದ್ಧಿ, ಮುಂದಿನ ಭವಿಷ್ಯದ ದೃಷ್ಟಿಯಿಂದ ಯುವಕರಿಗೆ ಉದ್ಯೋಗಗಳಲ್ಲಿ ಕೌಶಲ್ಯ ತರಬೇತಿ ನೀಡುವುದು ಸಮ್ಮೇಳನದ ಉದ್ದೇಶವಾಗಿದೆ ಎಂದು ಹೇಳಿದರು.
ಮೇಕ್ ಇನ್ ಇಂಡಿಯಾ ಸಮ್ಮೇಳನಕ್ಕೆ ಫೆ.13ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಚಾಲನೆ ನೀಡಲಿದ್ದು, ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು, ಸುರೇಶ್ ಪ್ರಭು, ಅನಂತಕುಮಾರ್, ಸ್ಮತಿ ಇರಾನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಫೆ.14ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಮತ್ತು ಎಂ.ಜೆ.ಅಕºರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಮ್ಮೇಳನದಲ್ಲಿ ಸುಮಾರು 4,000 ಪ್ರತಿನಿಧಿಗಳು ಭಾಗಿಯಾಗುತ್ತಿದ್ದು, ಮೇಕ್ ಇನ್ ಇಂಡಿಯಾ ವಿಷಯ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ. ಏರೋಸ್ಪೇಸ್ ಮತ್ತು ಡಿಫೆನ್ಸ್, ಬಯೋಟೆಕ್ನಾಲಜಿ ಮತ್ತು ಫಾರಸೂಟಿಕಲ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ಸ್, ಪ್ಲಾಸ್ಟಿಕ್ಸ್ ಮತ್ತು ಕೆಮಿಕಲ್ಸ್ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆಗಳು ಜರುಗಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕರಕ್ಷಣೆDefenceMake-in-India-Karnatakaaerospace sectorsಮೇಕ್ ಇನ್ ಇಂಡಿಯಾ-ಕರ್ನಾಟಕವೈಮಾನಿಕ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


