ಶಶಿಕಲಾಗೆ 4 ವರ್ಷ ಜೈಲು, ಪರಪ್ಪನ ಅಗ್ರಹಾರ ಜೈಲಿನ ಸುತ್ತ ಭದ್ರತೆ ಹೆಚ್ಚಳ
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು...

Published On :
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರಲಾಗುತ್ತಿದೆ.
ಸುಪ್ರೀಂಕೋರ್ಟ್ ಆದೇಶದಂತೆ, ಇಂದು ಸಂಜೆಯೊಳಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂದು ಶರಣಾಗಬೇಕಾದ್ದು, ಅವರೊಂದಿಗೆ, ಪ್ರಕರಣದ ಇತರ ಅಪರಾಧಿಗಳಾಗಿರುವ ಇಳವರಸಿ ಹಾಗೂ ಸುಧಾಕರನ್ ಅವರೂ ಸಹ ಜೈಲು ಸೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಕೇಂದ್ರೀಯ ಕಾರಾಗೃಹದ ಸುತ್ತ ಮುತ್ತ ಬಿಗಿಬಂದೋಬಸ್ತ್ ನೀಡಲಾಗಿದ್ದು, ಹೆಚ್ಚಿನ ಪೊಲೀಸ್ ಪಡೆಗಳನ್ನು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಶಶಿಕಲಾ ಅವರು ಶರಣಾಗುವ ವೇಳೆ ಯಾವುದೇ ಅಹಿತಕರ ಘಟನೆಗಳು, ದೊಂಬಿ, ಗಲಾಟೆ ನಡೆಯದಿರಲೆಂದು ಕಾರಾಗೃಹದ ಸುತ್ತಲೂ ನಿರ್ದಿಷ್ಟ ದೂರದವರೆಗೆ 144ನೇ ಸೆಕ್ಷನ್ ಜಾರಿಗೊಳಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bengaluruಭದ್ರತೆ ಹೆಚ್ಚಳparappana agrahara jailSecurity Beefed UpSasikala sentencedಶಶಿಕಲಾಗೆ ಶಿಕ್ಷೆಪರಪ್ಪನ ಅಗ್ರಹಾರ ಜೈಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


