ದಾಖಲೆ ಬರೆದ ಇಸ್ರೋ: ಏಕಕಾಲಕ್ಕೆ 104 ಉಪಗ್ರಹಗಳ ಉಡಾವಣೆ ಯಶಸ್ವಿ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದು, ಬಹು ನಿರೀಕ್ಷಿತ ಮತ್ತು ವಿಶ್ವದಾಖಲೆಯ ಏಕಕಾಲಕ್ಕೆ 104 ಉಪಗ್ರಹಗಳನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ..

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದು, ಬಹು ನಿರೀಕ್ಷಿತ ಮತ್ತು ವಿಶ್ವದಾಖಲೆಯ ಏಕಕಾಲಕ್ಕೆ 104 ಉಪಗ್ರಹಗಳನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಸ್ರೋದ ಯಶಸ್ವೀ ಉಡಾವಣಾ ವಾಹಕಗಳಲ್ಲಿ ಒಂದಾದ ಪಿಎಸ್‌ಎಲ್‌ವಿ ಸಿ 37 ವಾಹಕದ ಮೂಲಕ ಕಾರ್ಟೋಸ್ಯಾಟ್-2 ಸೇರಿದಂತೆ ಇತರೆ 103 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರ ಪ್ರದೇಶದ ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ ಸುಮಾರು 9.28ರ ವೇಳೆಗೆ ಉಡಾವಣೆ ಮಾಡಲಾಯಿತು. ಕಾರ್ಟೋಸ್ಯಾಟ್ -2 ಭೂವೀಕ್ಷಣಾ ಕಾರ್ಯ ನಡೆಸುವ ಉಪಗ್ರಹವಾಗಿದ್ದು, ಇದರೊಂದಿಗೆ ಅಮೆರಿಕ, ಜರ್ಮನಿ, ಇಸ್ರೋಲ್, ಯುಎಇ, ನೆದರ್‌ಲ್ಯಾಂಡ್, ಬೆಲ್ಜಿಯಂ ಸೇರಿದಂತೆ ವಿದೇಶದ 101 ವಾಣಿಜ್ಯ ಉದ್ದೇಶಿತ ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ.
104 ಉಪಗ್ರಹಗಳ ಪೈಕಿ ಭೂವೀಕ್ಷಣಾ ಕಾರ್ಯ ನಡೆಸುವ ಅಮೆರಿಕ ಸಂಸ್ಥೆಯ 88 ಚಿಕ್ಕ ಉಪಗ್ರಹ(ಕ್ಯೂಬ್‌ಸ್ಯಾಟ್)ಗಳು ಕಕ್ಷೆ ಸೇರಿದ್ದು, ಭಾರತದ ಇದಲ್ಲದೆ ಕಾರ್ಟೋಸ್ಯಾಟ್–2, ಐಎನ್‌ಎಸ್-1ಎ ಹಾಗೂ ಐಎನ್‌ಎಸ್–1ಬಿ ಸೇರಿದಂತೆ ಭಾರತದ ಮೂರು ಉಪಗ್ರಹಗಳು ಉಡಾವಣೆಯಾಗಿವೆ. ಪಿಎಸ್‌ಎಲ್‌ವಿ–ಸಿ37 ಉಡಾವಣಾ ವಾಹಕ ಒಟ್ಟು1500 ಕೆ.ಜಿ. ತೂಕದ 104 ಉಪಗ್ರಹಗಳನ್ನು ಯಶಸ್ವಿಯಾಗಿ ಹೊತ್ತೊಯ್ಯುವ ಮೂಲಕ ಇಸ್ರೋ ಹೊಸ ಮೈಲಿಗಲ್ಲು ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


