ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಪ್ರಮಾಣ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಆಪ್ತ ಎಡಪ್ಪಾಡಿ ಕೆ.ಪಳನಿಸ್ವಾಮಿ....

Published On :
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ಆಪ್ತ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಗುರುವಾರ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಮಧ್ಯಾಹ್ನ 4.30ರ ಸುಮಾರಿಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರು ಪಳನಿಸ್ವಾಮಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಕುರ್ಚಿಗಾಗಿ ನಡೆದ ಹೋರಾಟದಲ್ಲಿ ಶಶಿಕಲಾ ಬಣದ ಕೈ ಮೇಲಾಗಿದ್ದು, ಪಳನಿಸ್ವಾಮಿಗೆ 15 ದಿನದೊಳಗೆ ಬಹುಮತ ಸಾಬೀತುಪಡಿಸಬೇಕಾಗಿದೆ.
ಪಳನಿಸ್ವಾಮಿಯೊಂದಿಗೆ 30 ಶಾಸಕರು ಸಹ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಈಗಾಗಲೇ ಖಾತೆಗಳನ್ನು ಸಹ ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಪ್ರಭಾವಿ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಇತ್ತೀಚೆಗಷ್ಟೆ ಎಐಎಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದ ಕೆ.ಎ ಸೆಂಗೊಟ್ಟಯನ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕ್ರೀಡಾ ಮತ್ತು ಯುವ ಜನ ಸೇವೆ ಖಾತೆಗಳನ್ನು ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


