ಬೆಳ್ಳಂದೂರು ಕೆರೆಯಲ್ಲಿ ಬೆಂಕಿ: ತನಿಖೆಗೆ ಕೇಂದ್ರ ಪರಿಸರ ಸಚಿವಾಲಯ ಆದೇಶ
ಬೆಂಗಳೂರಿನ ಬೆಳ್ಳಂದೂರು ಕರೆಯಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ....

Published On :
ನವದೆಹಲಿ: ಬೆಂಗಳೂರಿನ ಬೆಳ್ಳಂದೂರು ಕರೆಯಲ್ಲಿ ಗುರುವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿ ಜನರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಸಚಿವಾಲಯ ಶುಕ್ರವಾರ ತನಿಖೆಗೆ ಆದೇಶಿಸಿದೆ.
ಘಟನೆಗೆ ಸಂಬಂಧಿಸಿದಂತೆ ನಾವು ತನಿಖೆಗೆ ಆದೇಶಿಸಿದ್ದೇವೆ. ಸಂಜೆ ವೇಳೆಗೆ ವರದಿ ಬರಲಿದ್ದು, ಬಳಿಕ ಕೆರೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದ ತಿಳಿಯಲಿದೆ ಎಂದು ಕೇಂದ್ರ ಪರಿಸರ ಸಚಿವ ಅನಿಲ್ ಮಾದವ್ ದಾವೆ ಅವರು ತಿಳಿಸಿದ್ದಾರೆ.
ಈ ಹಿಂದೆ ವಿಷಪೂರಿತ ನೊರೆಯಿಂದ ಸುದ್ದಿಯಾಗಿದ್ದ ಬೆಳ್ಳಂದೂರು ಕರೆಯಲ್ಲಿ ನಿನ್ನೆ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಎರಡು ವರ್ಷಗಳ ಹಿಂದೆ ಕೂಡ ಇದ್ದಕ್ಕಿದ್ದಂತೆ ಬೆಳ್ಳಂದೂರು ಕೆರೆಯಲ್ಲಿ ಭಾರೀ ನೊರೆ ಹಾಗೂ ಬೆಂಕಿ ಕಾಣಿಸಿಕೊಂಡಿತ್ತು.
ಸರ್ಜಾಪುರ ರಸ್ತೆಯಲ್ಲಿರುವ ಈ ಕೆರೆಗೆ ರಾಸಾಯನಿಕಗಳು ಮತ್ತು ಒಳಚರಂಡಿ ನೀರು ಸೇರುತ್ತಿರುವುದರಿಂದ ನೊರೆ ಕಾಣಿಸಿಕೊಳ್ತಾ ಇದೆ ಮತ್ತು ಆಗಾಗ ಬೆಂಕಿ ಬೀಳುತ್ತಿದೆ. ಇದರಿಂದ ಸುತ್ತಲ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಅವರು, ಕೆರೆಯಲ್ಲಿ ಡಂಪ್ ಮಾಡುವುದನ್ನು ನಿಲ್ಲಿಸುವಂತೆ ಬಿಬಿಎಂಪಿಗೆ, ಜಲ ಮಂಡಳಿಗೆ ಮತ್ತು ಇತರೆ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


