ಪ್ರಧಾನ ಸುದ್ದಿ

ಪುತ್ರನ ಕಣ್ಣಿನ ಶಸ್ತ್ರ ಚಿಕಿತ್ಸೆ ಸಂಬಂಧ ಹೈದರಾಬಾದ್ ಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪುತ್ರ ರೆಹನ್ ಕಣ್ಣಿನ ಶಸ್ತ್ರ ಚಿಕಿತ್ಸೆಗೆ....

ಪುತ್ರನ ಕಣ್ಣಿನ ಶಸ್ತ್ರ ಚಿಕಿತ್ಸೆ ಸಂಬಂಧ ಹೈದರಾಬಾದ್ ಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Published On :
ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪುತ್ರ ರೆಹನ್ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ಎರಡನೇ ಅಭಿಪ್ರಾಯ ಪಡೆಯಲು ಶನಿವಾರ ಹೈದರಾಬಾದ್ ಗೆ ಆಗಮಿಸಿದ್ದಾರೆ.
ಕ್ರಿಕೆಟ್ ಬಾಲ್ ನಿಂದ ಕಣ್ಣಿಗೆ ಏಟು ಮಾಡಿಕೊಂಡಿದ್ದ 16 ವರ್ಷದ ರೆಹನ್ ಚಿಕಿತ್ಸೆ ಕೊಡಿಸಲು ಪ್ರಿಯಾಂಕಾ ಗಾಂಧಿ ಅವರು ಇಂದು ಹೈದರಾಬಾದ್ ನ ಎಲ್ ವಿ ಪ್ರಸಾದ್ ಕಣ್ಣಿನ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇದಕ್ಕು ಮುನ್ನ ಪ್ರಿಯಾಂಕಾ ಗಾಂಧಿ ಹಾಗೂ ರಾಬರ್ಟ್ ವಾದ್ರಾ ದಂಪತಿ ದೆಹಲಿಯ ಏಮ್ಸ್ ಗೆ ಭೇಟಿ ನೀಡಿದ್ದರು. ಈಗ ಏಮ್ಸ್ ವೈದ್ಯರ ಸಲಹೆ ಮೇರೆಗೆ ಎಲ್ ವಿ ಪ್ರಸಾದ್ ಕಣ್ಣಿನ ಆಸ್ಪತ್ರೆಗೆ ಆಗಮಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಬಂಜಾರ ಹಿಲ್ಸ್ ನಲ್ಲಿರುವ ಎಲ್ ವಿ ಪ್ರಸಾದ್ ಆಸ್ಪತ್ರೆ ಸುತ್ತ ಹೈದರಾಬಾದ್ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿರುವ ಪ್ರಿಯಾಂಕಾ ಗಾಂಧಿ ಅವರು ನಿನ್ನೆಯಷ್ಟೇ ರಾಯ್ ಬರೇಲಿಯಲ್ಲಿ ನಡೆದ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.