ನಟಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಪಲ್ಸರ್ ಸುನಿ 10 ದಿನ ಪೊಲೀಸ್ ವಶಕ್ಕೆ
ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್....

Published On :
ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿಯನ್ನು ಕೋರ್ಟ್ ಶನಿವಾರ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಕಳೆದ ಗುರುವಾರ ಪಲ್ಸರ್ ಸುನಿಯನ್ನು ಬಂಧಿಸಿದ್ದ ಕೇರಳ ಪೊಲೀಸರು ಇಂದು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮಾರ್ಚ್ 5ರವೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿಡಿಯೋ ಮಾಡಲು ಬಳಸಿದ ಮೊಬೈಲ್ ಹಾಗೂ ಮೆಮೊರಿ ಕಾರ್ಡ್ ವಶಕ್ಕೆ ಪಡೆಯಲು ಹಾಗೂ ಪ್ರಕರಣದ ಹಿಂದೆ ಯಾರ ಪಿತೂರಿ ಇದೆ ಎಂಬುದುರ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಕೋರ್ಟ್ ಮನವಿ ಮಾಡಿದ್ದರು. ಪೊಲೀಸರ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ.
ಕಳೆದ ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ತ್ರಿಶೂರ್ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


