ಪ್ರಧಾನ ಸುದ್ದಿ

ಎಬಿವಿಪಿ ವಿರುದ್ಧ ದೆಹಲಿ ವಿಶ್ವವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆ

ಆರ್ ಎಸ್ ಎಸ್ ಪ್ರೇರಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಪತ್ರಕರ್ತರ ಮೇಲೆ ಫೆಬ್ರವರಿ ೨೨ ರಂದು

ಎಬಿವಿಪಿ ವಿರುದ್ಧ ದೆಹಲಿ ವಿಶ್ವವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಆರ್ ಎಸ್ ಎಸ್ ಪ್ರೇರಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಪತ್ರಕರ್ತರ ಮೇಲೆ ಫೆಬ್ರವರಿ ೨೨ ರಂದು ನಡೆಸಿದ ಹಲ್ಲೆಯನ್ನು ಖಂಡಿಸಿ ಮಂಗಳವಾರ ದೆಹಲಿ ವಿಶ್ವವಿದ್ಯಾಲಯದಲ್ಲಿ ನೂರಾರು ವಿದ್ಯಾರ್ಥಿಗಳು 'ಎಬಿವಿಪಿ ಹಿಂದಕ್ಕೆ ಹೋಗು' ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ. 
ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ೨೦೦೦ ಕ್ಕೂ ಹೆಚ್ಚು ಜನ ವಿಶ್ವವಿದ್ಯಾಲಯದ ಒಂದು ಅಂಚಿನಲ್ಲಿರುವ ಖಾಲ್ಸ ಕಾಲೇಜಿನಿಂದ ಮೆರವಣಿಗೆ ನಡೆಸಿ ಆರ್ಟ್ಸ್ ಫ್ಯಾಕಲ್ಟಿಯಲ್ಲಿ ನೆರೆದು ನಿರಂತರವಾಗಿ ಘೋಷಣೆಗಳನ್ನು ಕೂಗಿದ್ದಾರೆ. 
ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾದ ಮತ್ತು ಎಬಿವಿಪಿ ಖಂಡಿಸಿ ಬ್ಯಾನರ್ ಹಿಡಿದು ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. "ನಾವಿಲ್ಲಿ ಐಕ್ಯತೆ ಸಾರಲು ಸೇರಿದ್ದೇವೆ ಮತ್ತು ದೆಹಲಿ ವಿಶ್ವವಿದ್ಯಾಲಯ ಹಿಂಸೆಯ ವಿರುದ್ಧ ನಿಂತಿದೆ ಎಂದು ಎಬಿವಿಪಿಗೆ ತಿಳಿಸಲು" ಎಂದು ವಿದ್ಯಾರ್ಥಿ ಹಿಂಡೋಲೀ ದತ್ತ ಹೇಳಿದ್ದಾರೆ. 
ಈ ಪ್ರತಿಭಟನೆಯಲ್ಲಿ ಹೆಚ್ಚು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ನೆರೆದಿದ್ದು ವಿಶೇಷ. ಜೆ ಎನ್ ಯು ಮತ್ತು ಜಾಮಿಯಾ ಮಿಲಿಯ ಇಸ್ಲಾಮಿಯಾ ವಿದ್ಯಾರ್ಥಿಗಳು ಕೂಡ ಸಣ್ಣ ಸಂಖ್ಯೆಯಲ್ಲಿ ನೆರೆದಿದ್ದರು. 
ಜೆ ಎನ್ ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.