ಧರ್ಮ ಮತ್ತು ಜಾತಿ ಆಧಾರದ ಮೇಲೆ ಮತ ಕೇಳುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನೀಡಿದೆ.

ನವದೆಹಲಿ: ಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನೀಡಿದೆ.
ಚುನಾವಣೆಯಲ್ಲಿ ಧರ್ಮ ಮತ್ತ ಜಾತಿಯಾಧಾರದ ಮೇಲೆ ಮತ ಯಾಚಿಸುವ ವಿರುದ್ಧ ದಾಖಲಾಗಿದ್ದ ವಿವಿಧ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಾಂವಿಧಾನಕತಿ ಪೀಠವು, "ಚುನಾವಣೆ ಎಂಬುದು ಜಾತ್ಯಾತೀತ ಪ್ರಕ್ರಿಯೆಯಾಗಿದ್ದು, ಆ ನಿಟ್ಟಿನಲ್ಲೇ ಅದರ ಪ್ರಕ್ರಿಯೆಗಳು ನಡೆಯಬೇಕು. ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಬಾರದು. ಚುನಾವಣೆಗಳಲ್ಲಿ ಜಾತ್ಯಾತೀತವಾದವೇ ಮುಂಚೂಣಿಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅಂತೆಯೇ ಯಾವುದೇ ಕಾರಣಕ್ಕೂ ರಾಜಕೀಯ ಪಕ್ಷಗಳಾಗಲಿ ಅಥವಾ ಅಭ್ಯರ್ಥಿಗಳಾಗಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಮತ ಯಾಚನೆ ಮಾಡಬಾರದು ಎಂದು ಜಸ್ಟಿಸ್ ಟಿಎಸ್ ಠಾಕೂರ್ ನೇತೃತ್ವದ ಸಾಂವಿಧಾನಿಕ ಪೀಠ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


