ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮಹದೇವ ಪ್ರಸಾದ್ ಅಂತ್ಯಕ್ರಿಯೆ
ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರು: ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹದೇವ ಪ್ರಸಾದ್ ಅವರ ಪುತ್ರರಾದ ಗಣೇಶ್ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಾದ್ ಅವರ ಪಾರ್ಥೀವ ಶರೀರ ಈಗಾಗಲೇ ವಿಶೇಷ ಆ್ಯಂಬುಲೆನ್ಸ್ ವಾಹನದಲ್ಲಿ ಚಿಕ್ಕಮಗಳೂರಿನಿಂದ ಮೈಸೂರಿನತ್ತ ಆಗಮಿಸುತ್ತಿದೆ. ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಮೃತದೇಹ ಮೈಸೂರಿಗೆ ಆಗಮಿಸಲಿದ್ದು, 3 ಗಂಟೆ ಬಳಿಕ ಮಹದೇವ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ರಾತ್ರಿ ಸುಮಾರು 11.30ರ ಸುಮಾರಿನಲ್ಲಿ ಮೃತದೇಹವನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಳ್ಳಿಗೆ ಕೊಂಡೊಯ್ಯಲಾಗುತ್ತದೆ.
ಅಲ್ಲಿನ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಮಧ್ಯಾಹ್ನದ ವೇಳೆ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮಹದೇವ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


