ಪ್ರಧಾನ ಸುದ್ದಿ

ಹೃದಯಾಘಾತದಿಂದ ಸಚಿವ ಮಹದೇವ ಪ್ರಸಾದ್ ನಿಧನ

ರಾಜ್ಯ ಸಕ್ಕರೆ ಸಚಿವ ಹೆಚ್ ಎಸ್ ಮಹದೇವ ಪ್ರಸಾದ್ (58 ವರ್ಷ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯಾಘಾತದಿಂದ ಸಚಿವ ಮಹದೇವ ಪ್ರಸಾದ್ ನಿಧನ
ಸಂಗ್ರಹ ಚಿತ್ರ
Published On :

ಚಿಕ್ಕಮಗಳೂರು: ರಾಜ್ಯ ಸಕ್ಕರೆ ಸಚಿವ ಹೆಚ್ ಎಸ್ ಮಹದೇವ ಪ್ರಸಾದ್ (58 ವರ್ಷ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದ ಹೆಚ್ ಎಸ್ ಮಹದೇವ ಪ್ರಸಾದ್ ಅವರು ಖಾಸಗಿ ಹೊಟೆಲ್ ನಲ್ಲಿ  ತಂಗಿದ್ದರು. ಆದರೆ ರಾತ್ರಿ ಸುಮಾರು 2 ಗಂಟೆ ಹೊತ್ತಿನಲ್ಲಿ ಹೊಟೆಲ್ ಸಿಬ್ಬಂದಿ ಅವರ ಕೊಠಡಿಗೆ ತೆರಳಿ ಬಾಗಿಲು ತಟ್ಟಿದಾಗ ಅವರು ಬಾಗಿಲು ತೆರೆಯಲಿಲ್ಲ. ಬೆಳಗ್ಗೆ ಮತ್ತೆ ಬಾಗಿಲು ಬಡಿದಾಗ ಮತ್ತೆ ಅವರು ಬಾಗಿಲು ತೆಗೆಯದ ಕಾರಣ  ಅನುಮಾನಗೊಂಡ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಪ್ರಸ್ತುತ ಮಹದೇವ ಪ್ರಸಾದ್ ಅವರು ತಂಗಿದ್ದ ಕೊಠಡಿಯ ಬಾಗಿಲನ್ನು ತೆರೆಯಲಾಗಿದ್ದು, ಮಹದೇವ ಪ್ರಸಾದ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ  ಎಂದು ತಿಳಿದುಬಂದಿದೆ. ಮಹದೇವ ಪ್ರಸಾದ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.