ಪ್ರಧಾನ ಸುದ್ದಿ

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳ ಚಿತ್ರ ಬಿಡುಗಡೆ ಮಾಡಿದ ಪೊಲೀಸರು

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ....

ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳ ಚಿತ್ರ ಬಿಡುಗಡೆ ಮಾಡಿದ ಪೊಲೀಸರು
ಎರಡನೇ ಆರೋಪಿ ಲೆನೋ ಹಾಗೂ ಪ್ರಮುಖ ಆರೋಪಿ ಅಯ್ಯಪ್ಪ
Published On :
ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಗುರುವಾರ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಈ ಸಂಬಂಧ ಇಂದು ಸಂಜೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು, ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಅಯ್ಯಪ್ಪ ಮತ್ತು ಲೆನೋ ಎಂದು ಗುರುತಿಸಲಾಗಿದೆ. ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಡೆಲಿವರಿ ಬಾಯ್ ಹಾಗೂ ಐಟಿಐ ವಿದ್ಯಾರ್ಥಿಯಾಗಿರುವ ಅಯ್ಯಪ್ಪ ಎಂದು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಅಯ್ಯಪ್ಪ ಲಿಂಗರಾಜಪುರಂನ ನಿವಾಸಿಯಾಗಿದ್ದು,  ಹಲವು ವರ್ಷಗಳಿಂದ ಕೆಲಸ ಇಲ್ಲದ ಮನೆಯಲ್ಲಿ ಕಾಲ ಕಳೆಯುತ್ತಿದ್ದ. ಆದರೆ ಇತ್ತೀಚಿಗಷ್ಟೇ ಡೆಲಿವರಿ ಬಾಯ್ ಕೆಲಸಕ್ಕೆ ಸೇರಿದ್ದ.
ಆರೋಪಿಗಳು ಕಳೆದ ಕೆಲವ ದಿನಗಳಿಂದ ಯುವತಿಯ ಚಲನವಲನಗಳನ್ನು ಗಮನಿಸುತ್ತಿದ್ದು, ಡಿಸೆಂಬರ್ 31ರಂದು ಮಧ್ಯರಾತ್ರ ಕೃತ್ಯ ಎಸಗಿದ್ದಾರೆ ಎಂದರು.
ಪ್ರಕರಣ ಸಂಬಂಧ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆ ತಂಡ ನಾಲ್ವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನು ಇಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸೂದ್ ತಿಳಿಸಿದರು. ಅಲ್ಲದೆ ಬಂಧಿತ ನಾಲ್ವರು ಆನ್‌ಲೈನ್‌ ಫುಡ್‌ ಡೆಲಿವರಿ ಬಾಯ್‌ಗಳಾಗಿ ಪಾರ್ಟ್‌ ಟೈಂ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯದ ಸಿಸಿಟಿವಿ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 
ಹೇಳಿಕೆ ನೀಡಿ ದೂರು ನೀಡದೇ ತೆರಳಿದ ಸಂತ್ರಸ್ತ ಯುವತಿ!
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಬಾಣಸವಾಡಿ ಪೊಲೀಸ್ ಠಾಣೆಗೆ ಆಗಮಿಸಿ ಹೇಳಿಕೆ ನೀಡಿದ್ದಾರೆಯಾದರೂ, ಯುವಕರ ವಿರುದ್ಧ ದೂರು ನೀಡಲು ಯುವತಿ ಹಿಂದೇಟು ಹಾಕಿದ್ದಾರೆ ಎಂದು  ತಿಳಿದುಬಂದಿದೆ. 
ಮಾಧ್ಯಮಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ವ್ಯಾಪಕ ಸುದ್ದಿಯಾಗುತ್ತಿದ್ದಂತೆಯೇ ಸಂತ್ರಸ್ತ ಯುವತಿ ತನ್ನ ಸ್ನೇಹಿತೆಯೊಂದಿಗೆ ಠಾಣೆಗೆ ಆಗಮಿಸಿ ಹೇಳಿಕೆ ದಾಖಲಿಸಿದ್ದಾರೆ.
ಕಳೆದ ಡಿಸೆಂಬರ್ 31ರ ಮಧ್ಯರಾತ್ರಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿದ್ದ ಲಿನೋ ಮತ್ತು ಅಯ್ಯಪ್ಪ ಎಂಬುವವರು ರಸ್ತೆ ಮಧ್ಯದಲ್ಲಿಯೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಸಮೀಪದಲ್ಲಿನ ಸಿಸಿಟಿವಿ  ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.