ಪ್ರಧಾನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಲಕ್ಷುರಿ ಬಸ್ಸೊಂದು ಟ್ರಕ್ ಗೆ ಗುದ್ದಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ೪೦ ಕ್ಕೂ ಹೆಚ್ಚು ಜನಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು
ಸಾಂದರ್ಭಿಕ ಚಿತ್ರ
Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಶನಿವಾರ ಲಕ್ಷುರಿ ಬಸ್ಸೊಂದು ಟ್ರಕ್ ಗೆ ಗುದ್ದಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ೪೦ ಕ್ಕೂ ಹೆಚ್ಚು ಜನಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. 
"ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಟ್ರಕ್ ಒಂದಕ್ಕೆ ರಾಷ್ಟ್ರೀಯ ಹೆದ್ದಾರಿ ೬ರಲ್ಲಿ ಬೆಳಗ್ಗೆ ಲಕ್ಷುರಿ ಬಸ್ಸೊಂದು ಗುದ್ದಿದೆ. ಪೂರಿಯಿಂದ ಕಲ್ಕತಾಗೆ ಬಸ್ ಹಿಂದಿರುಗುತ್ತಿತ್ತು" ಎಂದು ಪೊಲೀಸರು ಹೇಳಿದ್ದಾರೆ. 
ಬಸ್ ಅತಿ ವೇಗವಾಗಿ ಚಲಿಸುತ್ತಿದ್ದರಿಂದ ಕಬ್ಬಿಣದ ಸರಳುಗಳು ಬಸ್ ಒಳಗೆ ತೂರಿಕೊಂಡಿವೆ ಎಂದು ಪೊಲೀಸರು ಹೇಳಿದ್ದಾರೆ. ಮಂಜು ಕವಿದ ವಾತಾವರಣದಿಂದ ರಸ್ತೆ ಸರಿಯಾಗಿ ಕಾಣದೆ ಇರುವದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಕೂಡ ತಿಳಿಯಲಾಗಿದೆ. 
ಹೌರಾದ ಉಲುಬೇರಿಯಾ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಲಾಗಿದೆ. "ಈ ಅಪಘಾತದ ನಂತರ ಚಾಲಕ ಮತ್ತು ಸಹಾಯಕ ಪರಾರಿಯಾಗಿದ್ದು ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ" ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.