14ನೇ ಪ್ರವಾಸಿ ಭಾರತೀಯ ದಿವಸಕ್ಕೆ ಪ್ರಧಾನಿ ಮೋದಿ ಚಾಲನೆ
ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14ನೇ ಪ್ರವಾಸಿ ಬಾರತೀಯ ದಿವಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದಾರೆ...

ಬೆಂಗಳೂರು: ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14ನೇ ಪ್ರವಾಸಿ ಬಾರತೀಯ ದಿವಸಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಚಾಲನೆ ನೀಡಿದ್ದಾರೆ.
ಪ್ರಧಾನಿ ಮೋದಿಯವರು ಆಶಯ ಭಾಷಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪೋರ್ಚುಗಲ್ ಪ್ರಧಾನಮಂತ್ರಿ ಆಂಥೋನಿಯೋ ಕೋಸ್ಟಾ, ರಾಜ್ಯಪಾಲ ವಜುಭಾಯ್ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಭಾಗವಸಿದ್ದಾರೆ.
ಮೂರು ದಿನಗಳ ಕಾಲ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದ್ದು, ನಗರದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಅನಿವಾಸಿ ಭಾರತೀಯರು ಹಾಗೂ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಇನ್ನಿತರೆ ವಿಚಾರಗೋಷ್ಠಿಗಳು ಕಾರ್ಯದಲ್ಲಿ ನಡೆಯಲಿದ್ದು, ಸಂಜೆ ವೇಳೆಗೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


