5 ರಾಜ್ಯಗಳಲ್ಲಿ ಪ್ರಧಾನಿ ಮತ್ತು ಇತರೆ ರಾಜಕೀಯ ನಾಯಕರ ಹೋರ್ಡಿಂಗ್ ಗಳನ್ನು ತೆರವುಗೊಳಿಸಿ: ಚುನಾವಣಾ ಆಯೋಗ
ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ರಾಜಕೀಯ ನಾಯಕರ ಭಾವಚಿತ್ರವಿರುವ...

Published On :
ನವದೆಹಲಿ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ರಾಜಕೀಯ ನಾಯಕರ ಭಾವಚಿತ್ರವಿರುವ ಎಲ್ಲಾ ಹೋರ್ಡಿಂಗ್ ಹಾಗೂ ಜಾಹೀರಾತುಗಳನ್ನು ತೆರವುಗೊಳಿಸಿ ಇಲ್ಲವೆ ಕಾಣದಂತೆ ಮುಚ್ಚುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ರಾಜ್ಯಗಳ ಚುನಾವಣಾ ಆಯುಕ್ತರಿಗೆ ಸೂಚಿಸಿದೆ.
ನಿನ್ನೆಯಷ್ಟೇ ನ್ಯಾಯಯುತ ಚುನಾವಣೆಗಾಗಿ ನರೇಂದ್ರ ಮೋದಿಯವರ ನಾಮಫಲಕಗಳು ಹಾಗೂ ಭಿತ್ತಿಪತ್ರಗಳನ್ನು ತೆಗೆಯಿರಿ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ಉತ್ತರ ಪ್ರದೇಶ ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರಗಳಲ್ಲಿ ಫೆಬ್ರವರಿ 4ರಿಂದ ಚುನಾವಣೆ ನಡೆಯುತ್ತಿದ್ದು, ಗ್ಯಾಸ್ ಸಿಲಿಂಡರ್ ಸಂಪರ್ಕ ಒದಗಿಸಿರುವ ಕುರಿತಂತೆ ಈ ಐದು ರಾಜ್ಯಗಳಲ್ಲಿ ಎಲ್ಲೆಡೆ ಪ್ರಧಾನಿ ಮೋದಿಯವರ ನಾಮಫಲಕ ಹಾಗೂ ಭಿತ್ತಿಚಿತ್ರಗಳು ರಾರಾಜಿಸುತ್ತಿವೆ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಜಾಹೀರಾತುಗಳು ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಪತ್ರದಲ್ಲಿ ಹೇಳಿಕೊಂಡಿತ್ತು.
ಚುನಾವಣೆ ನಡೆಯುವ ರಾಜ್ಯಗಳಲ್ಲಿ ಪ್ರಧಾನಮಂತ್ರಿಗಳ ಭಾವಿಚಿತ್ರ ಬಳಸಿಕೊಂಡು ಭಿತ್ತಿಚಿತ್ರಗಳು, ನಾಮಫಲಕಗಳು ಹಾಗೂ ಬ್ಯಾನರ್ ಗಳನ್ನು ಹಾಕುವುದು ನೀತಿ ಸಂಹಿತೆಗೆ ವಿರುದ್ಧವಾಗಿದ್ದು, ಇದು ನ್ಯಾಯಯುತ ಚುನಾವಣೆಗೆ ದಾರಿ ಮಾಡಿಕೊಡುವುದಿಲ್ಲ. ಹೀಗಾಗಿ ಕೂಡಲೇ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಜಾಹೀರಾತು ಫಲಕಗಳನ್ನು ತೆಗೆಯುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕೆಂದು ಕಾಂಗ್ರೆಸ್ ಮನವಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


