ಸಹರಾ ಡೈರಿ ಪ್ರಕರಣ: ಪ್ರಧಾನಿ ಮೋದಿ ವಿರುದ್ಧ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್ )ಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಹರಾ ಹಾಗೂ ಬಿರ್ಲಾ ಕಂಪನಿಗಳ ಡೈರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿದ್ದು, ಇದರ ಆಧಾರದ ಮೇಲೆ ವಿಶೇಷ ತನಿಖಾ ತಂಡದಿಂದ(ಎಸ್ಐಟಿ) ತನಿಖೆ ನಡೆಸಬೇಕು ಎಂದು ಕೋರಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ತನಿಖೆಗೆ ನಿರಾಕರಿಸಿರುವ ಸುಪ್ರೀಂ ಕೋರ್ಟ್, ಒಂದು ವೇಳೆ ಇಂತಹ ಅಸ್ಪಷ್ಟ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆಗೆ ಆದೇಶಿಸಿದರೆ, ಸಂವಿಧಾನಾತ್ಮಕ ಸಂಸ್ಥೆಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದೆ.
ಸಹರಾ ಮತ್ತು ಬಿರ್ಲಾ’ ಕಂಪೆನಿಗಳಿಂದ ವಶಪಡಿಸಿಕೊಂಡ ದಾಖಲೆಗಳಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖ್ಯಮಂತ್ರಿಗಳಿಗೆ ಹಣ ಸಂದಾಯವಾಗಿರುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಇದರ ಜಾಡು ಹಿಡಿದು ತನಿಖೆ ನಡೆಸುವಂತೆ ಸಿಬಿಐ, ಆದಾಯ ತೆರಿಗೆ ಇಲಾಖೆ, ಕೇಂದ್ರ ಜಾಗೃತ ಆಯೋಗಗಳಿಗೆ ದೂರು ಸಲ್ಲಿಸಿದ್ದರೂ ಅವು ತನಿಖೆ ನಡೆಸಲು ನಿರಾಕರಿಸಿವೆ. ಹೀಗಾಗಿ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರು.
ಸಹರಾ ಕಂಪೆನಿ ಹಣ ಪಾವತಿ ಮಾಡಿದ ಬಗ್ಗೆ ತನ್ನ ಡೈರಿಯಲ್ಲಿ ಗುಜರಾತ್, ದೆಹಲಿ, ಛತ್ತೀಸ್ ಘಡ ಮತ್ತು ಮಧ್ಯ ಪ್ರದೇಶ ‘ಸಿಎಂ’ಗಳಿಗೆ ಎಂದು ಬರೆಯಲಾಗಿದೆ. ಇವೆಲ್ಲಾ ನಡೆದಿದ್ದು 2013-14ರಲ್ಲಿ. ಈ ದಾಖಲೆಗಳನ್ನು ಪ್ರಶಾಂತ್ ಭೂಷಣ್ ಸುಪ್ರಿಂ ಕೋರ್ಟಿಗೆ ಸಲ್ಲಿಸಿದ್ದರು.
ಇನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ಪ್ರಧಾನಿ ನರೇಂದ್ರ ಮೋದಿ ಅವರು ಸಹರಾ ಕಂಪನಿಯಿಂದ 25 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


