ತ.ನಾಡು ಜನರ ಓಲೈಕೆಗಾಗಿ "ಸುಗ್ರೀವಾಜ್ಞೆ"ಗೆ ಮುಂದಾದರೆ "ಸುಪ್ರೀಂ" ನಲ್ಲಿ ಪ್ರಶ್ನೆ: ಪೇಟಾ
ತಮಿಳುನಾಡಿನ ಸಾಂಪ್ರದಾಯಿಕ ಆಚರಣೆ ಜಲ್ಲಿಕಟ್ಟು ವಿವಾದ ಮುಂದುವರೆದಿದ್ದು, ತಮಿಳುನಾಡು ಜನರ ಓಲೈಕೆಗಾಗಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ಅದನ್ನು ತಾವು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲೂ ಹಿಂಜರಿಯುವುದಿಲ್ಲ ಎಂದು ಪ್ರಾಣಿ ಸಂರಕ್ಷಣಾ ಸಂಸ್ಥೆ ಪೇಟಾ ತಿಳಿಸಿದೆ.

ನವದೆಹಲಿ: ತಮಿಳುನಾಡಿನ ಸಾಂಪ್ರದಾಯಿಕ ಆಚರಣೆ ಜಲ್ಲಿಕಟ್ಟು ವಿವಾದ ಮುಂದುವರೆದಿದ್ದು, ತಮಿಳುನಾಡು ಜನರ ಓಲೈಕೆಗಾಗಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ಅದನ್ನು ತಾವು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲೂ ಹಿಂಜರಿಯುವುದಿಲ್ಲ ಎಂದು ಪ್ರಾಣಿ ಸಂರಕ್ಷಣಾ ಸಂಸ್ಥೆ ಪೇಟಾ ತಿಳಿಸಿದೆ.
ಪೊಂಗಲ್ ಹಬ್ಬದ ಆಚರಣೆ ನಿಮಿತ್ತ ಸಾಂಪ್ರದಾಯಿಕ ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿರುವ ಅರ್ಜಿಗಳನ್ನು ಪೊಂಗಲ್ ಗೂ ಮುಂಚಿತವಾಗಿ ವಿಲೇವಾರಿ ಮಾಡಬೇಕು ಎಂಬ ತಮಿಳುನಾಡು ಜನರ ಮನವಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಕಾರಾ ವ್ಯಕ್ತಪಡಿಸಿತ್ತು. ಹೀಗಾಗಿ ತಮಿಳುನಾಡು ಸರ್ಕಾರ ಸೇರಿದಂತೆ ವಿವಿಧ ರಾಜಕಾರಣಿಗಳು ಕೇಂದ್ರ ಮೊರೆ ಹೋಗಿದ್ದು, ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ.
ಈ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಾಣಿ ಸಂರಕ್ಷಣಾ ಸಂಸ್ಥೆ ಪೇಟಾ, ತಮಿಳುನಾಡು ರಾಜಕಾರಣಿಗಳ ಒತ್ತಾಯಕ್ಕೆ ಮಣಿದು ಅಥವಾ ತಮಿಳುನಾಡು ಜನರ ಓಲೈಕೆಗಾಗಿ ಕೇಂದ್ರ ಸರ್ಕಾರ ಜಲ್ಲಿಕಟ್ಟು ಆಚರಣೆಗಾಗಿ ಸುಗ್ರೀವಾಜ್ಞೆ ಹೊರಡಿಸಿದರೆ ಖಂಡಿತಾ ತಾವು ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದೆ. ಜಲ್ಲಿಕಟ್ಟು ಆಚರಣೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆ ಸ್ವಾಗತಾರ್ಹವಾಗಿದ್ದು, ಇದನ್ನು ಪಾಲನೆ ಮಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೇಶದ ಅತ್ಯುನ್ನತ ಸಂಸ್ಥೆಯ ಆದೇಶವನ್ನೇ ಮೂಲೆಗಿಟ್ಟು ಸುಗ್ರೀವಾಜ್ಞೆ ಹೊರಡಿಸುವುದಾದರೆ ನ್ಯಾಯಾಂಗ ವ್ಯವಸ್ಥೆಗೆ ನಾವು ನೀಡುವ ಬೆಲೆಯಾದರೂ ಏನು ಎಂದು ಪೇಟಾ ಕಾರ್ಯಕರ್ತರಾದ ನಿಕಂಜ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


