ಯೋಧರು ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಕಠಿಣ ಕ್ರಮ: ಬಿಪಿನ್ ರಾವತ್
ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರ ಎದುರಿಸುತ್ತಿರುವ ಸೇನಾಧಿಕಾರಿಗಳು ಇದೀಗ ಯೋಧರ ಸಾಮಾಜಿಕ ಜಾಲತಾಣ ಬಳಕೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

ನವದೆಹಲಿ: ಭಾರತೀಯ ಯೋಧರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಳ್ಳುತ್ತಿರುವ ಬೆನ್ನಲ್ಲೇ ತೀವ್ರ ಮುಜುಗರ ಎದುರಿಸುತ್ತಿರುವ ಸೇನಾಧಿಕಾರಿಗಳು ಇದೀಗ ಯೋಧರ ಸಾಮಾಜಿಕ ಜಾಲತಾಣ ಬಳಕೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಇನ್ನು ಮುಂದೆ ಯಾವುದೇ ಸೈನಿಕರು ತಮ್ಮ ಸಮಸ್ಯೆಗಳೇನೇ ಇದ್ದರೂ ಅದನ್ನು ತಮ್ಮ ಬಳಿಗೇ ನೇರವಾಗಿ ತರಬಹದು. ಇಲ್ಲವಾದಲ್ಲಿ ಕ್ಯಾಂಪ್ ನಲ್ಲಿ ಅಳವಡಿಸಲಾಗಿರುವ ದೂರು ಪೆಟ್ಟಿಗೆಯಲ್ಲಿ ಪತ್ರದ ಮೂಲಕ ಹಾಕಬಹುದು. ಅದು ಬಿಟ್ಟು ನೇರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಮಸ್ಯೆ ಹೇಳಿಕೊಳ್ಳುವಂತಿಲ್ಲ. ಹಾಗೇನಾದರೂ ಯೋಧರು ಸಾಮಾಜಿಕ ಜಾಲತಾಣದಲ್ಲಿ ಸಮಸ್ಯೆ ಹಂಚಿಕೊಂಡರೆ ಅದನ್ನು ಅಶಿಸ್ತು ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
"ಕೆಲ ಯೋಧರು ತಮ್ಮ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ತಮ್ಮ ಸಮಸ್ಯೆ ಬಗೆಹರಿಯಬಹುದು ಎಂದು ಅವರು ಎಣಿಸಿದ್ದರೆ ಖಂಡಿತಾ ಅದು ತಪ್ಪು. ಇನ್ನೂ ಸಮಸ್ಯೆ ಉಲ್ಬಣವಾಗುತ್ತದೆ. ಹೀಗಾಗಿ ತಮ್ಮ ಸಮಸ್ಯೆಗಳೇನೇ ಇದ್ದರೂ ನನ್ನ ಬಳಿ ಅವರು ನೇರವಾಗಿ ಯಾವುದೇ ಮುಜುಗರ ವಿಲ್ಲದೇ ಹಂಚಿಕೊಳ್ಳಬಹುದು. ಖುದ್ಧು ನಾನೇ ಮುಂದೆ ನಿಂತು ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಯೋಧರು ಸಮಸ್ಯೆ ಹೇಳಿಕೊಳ್ಳುವುದರಿಂದ ಸೇನೆಯ ಸ್ಥೈರ್ಯ ಕಳೆಗುಂದುತ್ತದೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಈ ಹಿಂದೆ ಬಿಎಸ್ ಎಫ್ ನ ಯೋಧ ತೇಜ್ ಬಹದ್ದೂರ್ ಯಾದವ್ ಅವರು ಗಡಿಯಲ್ಲಿ ನಿಂತೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದರು. ತಮಗೆ ನೀಡುತ್ತಿರುವ ಆಹಾರ ಕಳಪೆ ಮಟ್ಟದಾಗಿದೆ ಎಂದು ಹೇಳಿಕೊಂಡಿದ್ದರು. ಇದಾದ ಬಳಿಕ ಕೆಲ ಸೈನಿಕರು ಸರಣಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಟ್ಟಿದ್ದರು. ಇದರಿಂದ ಸೇನೆ ಹಾಗೂ ಕೇಂದ್ರ ಸರ್ಕಾರ ಮುಜುಗರಕ್ಕೀಡಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


