ಅಖಿಲೇಶ್ ಯಾದವ್ ಪರ ಪ್ರಚಾರಕ್ಕಿಳಿಯಲಿರುವ ಲಾಲು ಮತ್ತು ಪುತ್ರ ತೇಜಸ್ವಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪರ ಪ್ರಚಾರ ಮಾಡುವುದಾಗಿ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಮಂಗಳವಾರ ಘೋಷಿಸಿದ್ದಾರೆ.

Published On :
ಪಾಟ್ನಾ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪರ ಪ್ರಚಾರ ಮಾಡುವುದಾಗಿ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್ ಮಂಗಳವಾರ ಘೋಷಿಸಿದ್ದಾರೆ. ಅವರ ಪುತ್ರ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
"ಅಖಿಲೇಶ್ ಮುಖ್ಯಮಂತ್ರಿಯಾಗಿ ಹಿದಿರುಗುವುದಕ್ಕಾಗಿ ನಾನು ತೇಜಸ್ವಿಯೊಂದಿಗೆ ಪ್ರಚಾರದಲ್ಲಿ ಭಾಗಿಯಾಗುತ್ತೇನೆ" ಎಂದು ಲಾಲು ಪ್ರಸಾದ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಆಡಳಿತ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಸಲುವಾಗಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಕೂಡ ಲಾಲು ಪ್ರಸಾದ್ ಘೋಷಿಸಿದ್ದಾರೆ.
ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಬೇಕು ಎಂದು ಕೂಡ ಅವರು ಸಲಹೆ ನೀಡಿದ್ದಾರೆ.
"ಸೋನಿಯಾ ಗಾಂಧಿ (ಕಾಂಗ್ರೆಸ್ ಅಧ್ಯಕ್ಷೆ) ವಿಧಾನ ಸಭಾ ಚುನಾವಣೆಗಳಲ್ಲಿ ಅಖಿಲೇಶ್ ಅವರಜೊತೆಗೆ ಕೈಜೋಡಿಸುವುದು ಸೂಕ್ತ" ಎಂದು ಲಾಲು ಹೇಳಿದ್ದಾರೆ.
ಈ ಹಿಂದೆ ಅಖಿಲ್ ಮತ್ತು ಮುಲಾಯಂ ಕೋಮುವಾದಿ ಶಕ್ತಿಗಳನ್ನು ಹತ್ತಿಕ್ಕಲು ಒಂದಾಗಬೇಕು ಎಂದಿದ್ದ ಲಾಲು "ನೇತಾಜಿ (ಮುಲಾಯಂ ಸಿಂಗ್ ಯಾದವ್) ತಮ್ಮ ಪುತ್ರ ಅಖಿಲೇಶ್ ಅವರಿಗೆ ಆಶೀರ್ವದಿಸಬೇಕು ಎಂದು ಕೋರುತ್ತೇನೆ" ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


