ಪ್ರಧಾನ ಸುದ್ದಿ

ಮದ್ಯ ನಿಷೇಧ ಬೆಂಬಲಿಸಿ ಲಕ್ಷಾಂತರ ಬಿಹಾರಿಗಳಿಂದ ಮಾನವ ಸರಪಳಿ

ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಲಕ್ಷಾಂತರ ಜನ ಶನಿವಾರ ಬಿಹಾರದಲ್ಲಿ ರಾಜ್ಯ ಸರ್ಕಾರದ ಮದ್ಯ ನಿಷೇಧ ನೀತಿಯನ್ನು ಬೆಂಬಲಿಸಿ ಮಾನವ ಸರಪಳಿ ನಿರ್ಮಿಸಿದ್ದಾರೆ.

ಮದ್ಯ ನಿಷೇಧ ಬೆಂಬಲಿಸಿ ಲಕ್ಷಾಂತರ ಬಿಹಾರಿಗಳಿಂದ ಮಾನವ ಸರಪಳಿ
ಮದ್ಯ ನಿಷೇಧ ಬೆಂಬಲಿಸಿ ಮಾನವ ಸರಪಳಿ ನಿರ್ಮಿಸಿದ ಲಕ್ಷಾಂತರ ಬಿಹಾರಿಗಳು
Published On :
ಪಾಟ್ನಾ: ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಲಕ್ಷಾಂತರ ಜನ ಶನಿವಾರ ಬಿಹಾರದಲ್ಲಿ ರಾಜ್ಯ ಸರ್ಕಾರದ ಮದ್ಯ ನಿಷೇಧ ನೀತಿಯನ್ನು ಬೆಂಬಲಿಸಿ ಮಾನವ ಸರಪಳಿ ನಿರ್ಮಿಸಿದ್ದಾರೆ. 
ಈ ಮಾನವ ಸರಪಳಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಮೈತ್ರಿ ಪಕ್ಷ ಆರ್ ಜೆ ಡಿ ಅಧ್ಯಕ್ಷ ಲಾಲು ಪ್ರಸಾದ್, ಕಾಂಗ್ರೆಸ್ ಮುಖಂಡರು ಹಾಗು ವಿರೋಧ ಪಕ್ಷ ಬಿಜೆಪಿ ಮುಖಂಡರು ಕೂಡ ಭಾಗಿಯಾಗಿದ್ದು ವಿಶೇಷ. 
ರಾಜ್ಯದಲ್ಲಿ ಮದ್ಯ ನಿಷೇಧ ಬೆಂಬಲಿಸಿ ವಿಶ್ವದಲ್ಲೇ ಅತಿ ದೊಡ್ಡದಾದ ಅಂದರೆ ೧೧,೦೦೦ ಕಿಲೋ ಮೀಟರ್ ಉದ್ದದ ಮಾನವ ಸರಪಳಿ ನಿರ್ಮಿಸುತ್ತಿರುವುದಾಗಿ ಬಿಹಾರದ ಮುಖ್ಯ ಕಾರ್ಯದರ್ಶಿ ಅಂಜನಿ ಕುಮಾರ್ ಸಿಂಗ್ ಹೇಳಿದ್ದಾರೆ. 
ಈ ಮಾನವ ಸರಪಳಿಯ ಚಿತ್ರವನ್ನು ದಾಖಲಿಸಲು ಒಂದು ವಿದೇಶಿ ಮತ್ತು ಎರಡು ಇಸ್ರೋ ಉಪಗ್ರಹಗಳು, ನಾಲ್ಕು ವಿಮಾನಗಳು, ಎರಡು ಹೆಲಿಕ್ಯಾಪ್ಟರ್ ಗಳು ಮತ್ತು ೪೦ ಡ್ರೋನ್ ಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
೧೨:೧೫ ರಿಂಗ ೧ ಘಂಟೆಯ ನಡುವೆ ಸುಮಾರು ೨೦ ದಶಲಕ್ಷ ಜನ ಈ ಮಾನವ ಸರಪಳಿಗೆ ಕೈಜೋಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.