ಪ್ರಧಾನ ಸುದ್ದಿ

ಕಳೆದ ವರ್ಷ ಗಡಿ ದಾಟಿದ್ದ ಭಾರತೀಯ ಯೋಧ ಚಂದು ಚವ್ಹಾಣ್ ಬಿಡುಗಡೆ: ಪಾಕ್

ಕಳೆದ ವರ್ಷ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಕ್ಕೆ ಹೋಗಿ ಅಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಯೋಧ...

ಕಳೆದ ವರ್ಷ ಗಡಿ ದಾಟಿದ್ದ ಭಾರತೀಯ ಯೋಧ ಚಂದು ಚವ್ಹಾಣ್ ಬಿಡುಗಡೆ: ಪಾಕ್
ಯೋಧ ಚಂದು ಚವ್ಹಾಣ್
Published On :
ಇಸ್ಲಾಮಾಬಾದ್: ಕಳೆದ ವರ್ಷ ಆಕಸ್ಮಿಕವಾಗಿ ಭಾರತದ ಗಡಿ ದಾಟಿ ಪಾಕಿಸ್ತಾನದ ಗಡಿಯೊಳಕ್ಕೆ ಹೋಗಿ ಅಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ಯೋಧ ಚಂದು ಚವ್ಹಾಣ್ ಅವರನ್ನು ಬಿಡುಗಡೆ ಮಾಡುವುದಾಗಿ ಶನಿವಾರ ಪಾಕಿಸ್ತಾನ ಪ್ರಕಟಣೆಯಲ್ಲಿ ತಿಳಿಸಿದೆ.
22 ವರ್ಷದ ಯೋಧ ಚಂದು ಚವ್ಹಾಣ್ ಅವರನ್ನು ಮಾನವೀಯತೆ ಆಧಾರದ ಮೇಲೆ ವಾಗಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಒಪ್ಪಿಸುವುದಾಗಿ ಪಾಕ್ ಸೇವೆ ಪ್ರಕಟಣೆಯಲ್ಲಿ ತಿಳಿಸಿದೆ.
ಪಾಕಿಸ್ತಾನ ಗಡಿಯೊಳಕ್ಕೆ ನುಸುಳಿ ಅಲ್ಲಿ ಸೆರೆ ಸಿಕ್ಕಿರುವ ಯೋಧ ಚಂದು ಚವ್ಹಾಣ್ ಬಗ್ಗೆ ಮಾಹಿತಿ ಕಲೆಹಾಕಿದ್ದ ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕರೊಂದಿಗೆ ಯೋಧನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು.
ಮಹಾರಾಷ್ಟ್ರದ ಭಮ್ರೆ ಜಿಲ್ಲೆಯ ಧುಲೆ ಎಂಬ ಊರಿನ ಚಂದು ಚವ್ಹಾಣ್ ಅವರು 2016ರ ಸೆಪ್ಟಂಬರ್ 30ರಂದು ತಮಗರಿವಿಲ್ಲದಂತೆಯೇ ಪಾಕಿಸ್ತಾನದ ಗಡಿ ದಾಟಿ ಹೋಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.