ಪ್ರಧಾನ ಸುದ್ದಿ

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; 23 ಸಾವು, 50ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ರೈಲು ಹಳಿ ತಪ್ಪಿದ ಪರಿಣಾಮ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; 23 ಸಾವು, 50ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಹಳಿ ತಪ್ಪಿದ ರೈಲು
Published On :

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ರೈಲು ಹಳಿ ತಪ್ಪಿದ ಪರಿಣಾಮ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ಆಂಧ್ರಪ್ರದೇಶದ ರಾಯಘಡ ಸಮೀಪ ಕೂನೇರು ನಿಲ್ದಾಣದ ಬಳಿ ಹಳಿ ತಪ್ಪಿದೆ. ಜಗದಲ್ ಪುರ-ಭುವನೇಶ್ವರ ನಡುವೆ ಸಂಚರಿಸುತ್ತಿದ್ದ  ರೈಲು ಹಿರಾಖಂಡ್ ಎಕ್ಸೆಪ್ರೆಸ್ ರೈಲು ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಕೂನೇರು ರೈಲು ನಿಲ್ದಾಣದ ಸಮೀಪ ಹಳಿ ತಪ್ಪಿತ್ತು. ರೈಲಿನ ಎಂಜಿನ್ ಸೇರಿದಂತೆ 9 ಬೋಗಿಗಳು ಹಳಿ ತಪ್ಪಿದ  ಪರಿಣಾಮ ರೈಲಿನಲ್ಲಿದ್ದ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂತೆಯೇ ಸುಮಾರು 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಸೇರಿದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಖಂಗೊಂಡಿರುವ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು  ಹೊರತರಲು ಹರಸಾಹಸ ಪಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.