ಜಲ್ಲಿಕಟ್ಟು: ಸುಗ್ರೀವಾಜ್ಞೆ ಹೊರತಾಗಿಯೂ ಶಾಶ್ವತ ಕ್ರಮಕ್ಕೆ ಆಗ್ರಹ; ಮರೀನಾ ಬೀಚ್ ನಲ್ಲಿ ಮುಂದುವರೆದ ಪ್ರತಿಭಟನೆ
ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದ್ದು, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಹೊರತಾಗಿಯೂ ಪ್ರತಿಭಟನಾಕಾರರು ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಚೆನ್ನೈ: ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದ್ದು, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಹೊರತಾಗಿಯೂ ಪ್ರತಿಭಟನಾಕಾರರು ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಚೆನ್ನೈನ ಮರೀನಾ ಬೀಚ್ ನಲ್ಲಿ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ತಮಿಳು ಸಂಘಟನೆಗಳ ಪ್ರತಿಭಟನೆ ಮುಂದುವರೆಸಲಾಗುತ್ತಿದ್ದು, ತಮಿಳುನಾಡು ಸಿಎಂ ಒ ಪನ್ನೀರ್ ಸೆಲ್ವಂ ಅವರ ಮನವಿಯನ್ನು ತಳ್ಳಿ ಹಾಕಿರುವ ಪ್ರತಿಭಟನಾಕಾರರು ಜಲ್ಲಿಕಟ್ಟು ಕುರಿತಂತೆ ಶಾಶ್ವತ ಕಾನೂನು ರೂಪಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಈ ನಡುವೆ ಸುಗ್ರೀವಾಜ್ಞೆ ತಂದು ಜಲ್ಲಿಕಟ್ಟು ಆಚರಣೆಗೆ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿದ್ದಂತೆಯೇ ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆ ಮತ್ತೆ ಗರಿಗೆದರಿದ್ದು, ವಿವಿಧ ಜಿಲ್ಲೆಗಳಲ್ಲಿ ಗೂಳಿ ಕಾಳಗಕ್ಕೆ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ತಮಿಳುನಾಡಿನ ತಿರುಚ್ಚಿ, ಮಧುರೈ, ಅಲಂಗಾನಲ್ಲೂರ್, ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜಲ್ಲಿಕಟ್ಟು ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 500ಕ್ಕೂ ಹೆಚ್ಚು ಗೂಳಿಗಳಿಗೆ ಈಗಾಗಲೇ ಪೂಜೆ ನೆರವೇರಿಸಲಾಗಿದ್ದು, ಗೂಳಿ ಓಡುವ ಪಥ ಸಿದ್ಧಪಡಿಸಲಾಗಿದೆ.
ಅಂತೆಯೇ ಮುಂಜಾಗ್ರತಾ ಕ್ರಮವಾಗಿ ಹಲವು ಆ್ಯಂಬುಲೆನ್ಸ್ ಗಳು, ವೈದ್ಯರ ತಂಡ ಹಾಗೂ ಪಶು ತಜ್ಞರು ಜಲ್ಲಿಕಟ್ಟು ನಡೆಯುವ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


