ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!
ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.

ಚೆನ್ನೈ: ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ಸತತ ಐದು ದಿನಗಳಿಂದ ಮರೀನಾ ಬೀಚ್ ನಲ್ಲಿ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಕೈಬಿಟ್ಟಿದ್ದು, ಜಲ್ಲಿಕಟ್ಟು ರಕ್ಷಣೆ ಸಂಬಂಧ ಕೇಂದ್ರ ಸರ್ಕಾರ ಶಾಶ್ವತ ಕಾನೂನು ರೂಪಿಸಲು ಐದಾರು ತಿಂಗಳು ಬೇಕಾಗುತ್ತದೆ. ಹೀಗಾಗಿ ನಾವು ನಮ್ಮ ಪ್ರತಿಭಟನೆಯನ್ನು ಪ್ರಸ್ತುತ ಕೈ ಬಿಡುತ್ತಿದ್ದೇವೆ. ಇನ್ನೆರಡು ತಿಂಗಳುಗಳಲ್ಲಿ ಶಾಶ್ವತ ಕ್ರಮಕ್ಕೆ ಮುಂದಾಗದಿದ್ದರೆ ಆಗ ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಂತೆಯೇ ಇಂದು ಸಂಜೆ ನಡೆಯುವ ವಿಶೇಷ ಅಧಿವೇಶನದಲ್ಲಿ ಜಲ್ಲಿಕಟ್ಟು ಪರ ಸುಗ್ರೀವಾಜ್ಞೆಗೆ ಅನುಮೋದನೆ ದೊರೆತ ಪತ್ರದ ಪ್ರತಿ ಕೈಗೆ ಸಿಕ್ಕ ತಕ್ಷಣದಿಂದಲೇ ಮರೀನಾ ಬೀಚ್ ತೊರೆಯುವುದಾಗಿಯೂ ವಿದ್ಯಾರ್ಥಿಗಳು ಹೇಳಿದ್ದಾರೆ.
ಮರೀನಾ ಬೀಚ್ ಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಆಗಮನ; ವಿದ್ಯಾರ್ಥಿಗಳೊಂದಿಗೆ ಸಂಧಾನ ಮಾತುಕತೆ
ಇನ್ನು ಪ್ರತಿಭಟನೆ ನಡೆಯುತ್ತಿರುವ ಚೆನ್ನೈನ ಮರೀನಾ ಬೀಚ್ ಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಆಗಮಿಸಲಿದ್ದು, ಪ್ರತಿಭಟನಾ ನಿರಚ ವಿದ್ಯಾರ್ಥಿಗಳೊಂದಿಗೆ ಸಂಧಾನ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮರೀನಾ ಬೀಚ್ ನಂತೆಯೇ ತಿರುಚ್ಚಿಯಲ್ಲೂ ಪ್ರತಿಭಟನಾಕಾರರು ಪ್ರತಿಭಟನೆಯನ್ನು ನಿಲ್ಲಿಸಿದ್ದು, ಪೊಲೀಸರೊಂದಿಗೆ ನಡೆಸಿದ ಸಂಧಾನ ಮಾತುಕತೆ ಫಲಪ್ರದವಾದ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಕೊಯಮತ್ತೂರಿನಲ್ಲಿ ಹಿಂಸಾಚಾರ; 5 ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ
ಕೊಯಮತ್ತೂರಿನ ಗಾಂಧಿಪುರಂ ಜಂಕ್ಷನ್ ನಲ್ಲಿ ನಡೆಯುತ್ತಿದ್ದ ಜಲ್ಲಿಕಟ್ಟು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಅಲ್ಲಿ 5 ವಿದ್ಯಾರ್ಥಿಗಳು ಗಾಯಗೊಂಡು, ಓರ್ವ ವಿದ್ಯಾರ್ಥಿಗಂಭೀರನಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಸ್ತುತ ಎಲ್ಲ ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


