ಪ್ರಧಾನ ಸುದ್ದಿ

ಬಜೆಟ್: ಚುನಾವಣಾ ರಾಜ್ಯಗಳಿಗೆ ಯಾವುದೇ ಸ್ಕೀಮ್ ಘೋಷಿಸುವಂತಿಲ್ಲ: ಚುನಾವಣಾ ಆಯೋಗ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ 2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಬಜೆಟ್: ಚುನಾವಣಾ ರಾಜ್ಯಗಳಿಗೆ ಯಾವುದೇ ಸ್ಕೀಮ್ ಘೋಷಿಸುವಂತಿಲ್ಲ: ಚುನಾವಣಾ ಆಯೋಗ
ಸಂಗ್ರಹ ಚಿತ್ರ
Published On :

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ 2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇದೇ ಫೆಬ್ರವರಿ 1ರಂದು ನಡೆಯಲಿರುವ ಕೇಂದ್ರ ಬಜೆಟ್ ಗೆ ಚುನಾವಣಾ ಆಯೋಗ ಷರತ್ತು ಬದ್ಧ ಅನುಮತಿ ನೀಡಿದ್ದು, ಸೋಮವಾರ ಈ ಬಗ್ಗೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಚುನಾವಣೆ  ಘೋಷಣೆಯಾಗಿರುವ ಐದು ರಾಜ್ಯಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳನ್ನಾಗಲಿ ಅಥವಾ ಆ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆಗಳನ್ನಾಗಲಿ ಈ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡುವಂತಿಲ್ಲ ಎಂದು ಹೇಳಿದೆ.

"ನ್ಯಾಯಯುತ ಮತ್ತು ಮುಕ್ತ ಚುನಾವಣಾ ಪ್ರಕ್ರಿಯೆಗಾಗಿ ಆಯೋಗ ಕೇಂದ್ರ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡುತ್ತಿದ್ದು, ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ  ರಾಜ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡದಂತೆ ಮತ್ತು  ಬಜೆಟ್ ಭಾಷಣದಲ್ಲಿ ಆ ರಾಜ್ಯಗಳ ಕುರಿತು ಮಾಹಿತಿಯನ್ನು ಪ್ರಸ್ತಾಪ ಮಾಡಂತೆ ಸೂಚನೆ ನೀಡಲಾಗಿದೆ. ಬಜೆಟ್ ನಲ್ಲಿ ಈ ರಾಜ್ಯಗಳಿಗೆ ಸಂಬಂಧಿಸಿದ  ಯಾವುದೇ ಘೋಷಣೆಗಳು ಮತದಾರನ ಮೇಲೆ ಪರಿಣಾಮ ಬೀರುವು ಸಾಧ್ಯತೆ ಇರುವುದರಿಂದ ಈ ಕ್ರಮಕ್ಕೆ ಮುಂದಾಗಿದ್ದೇವೆ" ಎಂದು ಕೇಂದ್ರ ಚುನವಣಾ ಆಯೋಗದ ಕಾರ್ಯದರ್ಶಿ ಪಿಕೆ ಸಿನ್ಹಾ ಹೇಳಿದ್ದಾರೆ.

ಇದೇ ಫೆಬ್ರವರಿ 4ರಿಂದ ಮಾರ್ಚ್ 8ರವೆರಗೆ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 11 ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.