ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಅಧಿಕಾರ ಸ್ವೀಕಾರ
ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಇಂದು ಅಧಿಕಾರ ಸ್ವೀಕರಿಸಿದರು...

Published On :
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್ ಕುಮಾರ್ ಜ್ಯೋತಿ ಇಂದು ಅಧಿಕಾರ ಸ್ವೀಕರಿಸಿದರು.
ಗುಜರಾತ್ ನ ನಿವೃತ್ತ ಮುಖ್ಯ ಕಾರ್ಯದರ್ಶಿ ಅಚಲ್ ಕುಮಾರ್ ಜ್ಯೋತಿ ಇಂದು ಸಿಇಸಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು ಇದೇ ಜುಲೈ 6ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ಇಂದು 64 ವರ್ಷ ವಯಸ್ಸಿನ ಅಚಲ್ ಕುಮಾರ್ ಜ್ಯೋತಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ,
1975ರ ಬ್ಯಾಚ್‌ನ ಗುಜರಾತ್ ಕೇಡರ್‌ನ ಭಾರತೀಯ ಆಡಳಿತಾತ್ಮಕ ಸೇವೆ(ಐಎಎಸ್) ಅಧಿಕಾರಿಯಾಗಿದ್ದ ಅಚಲ್ ಕುಮಾರ್ ಅವರು ಗುಜರಾತ್‌ನ ವಿಚಕ್ಷಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 2013 ರಲ್ಲಿ ಗುಜರಾತ್ ನ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದರು.
ರಾಜ್ಯ ಕಂದಾಯ, ನೀರು ಪೂರೈಕೆ ಮತ್ತು ಕೈಗಾರಿಕಾ ಇಲಾಖೆಗಳ ಕಾರ್ಯದರ್ಶಿಯಾಗಿ ಕೂಡ ಕೆಲಸ ನಿರ್ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


