ಪ್ರಧಾನ ಸುದ್ದಿ

ಸತ್ತ ಮಗುವಿನೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಗ್ಯಾಂಗ್ ರೇಪ್ ಸಂತ್ರಸ್ತೆ

ಪತಿಯೊಂದಿಗೆ ಜಗಳ ಮಾಡಿಕೊಂಡು ತವರು ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಆಟೋವೊಂದರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ...

ಸತ್ತ ಮಗುವಿನೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಗ್ಯಾಂಗ್ ರೇಪ್ ಸಂತ್ರಸ್ತೆ
ಸಾಂದರ್ಭಿಕ ಚಿತ್ರ
Published On :
ಗುರಗಾವ್: ಪತಿಯೊಂದಿಗೆ ಜಗಳ ಮಾಡಿಕೊಂಡು ತವರು ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಆಟೋವೊಂದರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ 9 ತಿಂಗಳ ಮಗುವನ್ನು ಕೊಂದಿರುವ ಘಟನೆ ಗುರಗಾವ್ ನಲ್ಲಿ ನಡೆದಿದೆ.
23 ವರ್ಷದ ಮಹಿಳೆ ತನ್ನ ಗಂಡನೊಂದಿಗೆ ಜಗಳ ಮಾಡಿಕೊಂಡು ತವರು ಮನೆಗೆ ತೆರಳುತ್ತಿದ್ದಳು. ಆಕೆ ಲಾರಿಯೊಂದರಲ್ಲಿ ಮಗುವಿನ ಜೊತೆ ಪ್ರಯಾಣಿಸುತ್ತಿದ್ದಳು. ಈ ವೇಳೆ  ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕ ಆಕೆಗೆ ಲೈಂಗಿಕ ಕಿರುಕುಳ ನೀಡಿದ, ಸ್ವಲ್ಪ ದೂರ ಕ್ರಮಿಸಿದ ನಂತರ ಆಕೆ ಲಾರಿ ಇಳಿದು ಆಟೋ ಹತ್ತಿದ್ದಾಳೆ. 
ಆಟೋದಲ್ಲಿ ಆಕೆಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ವೇಳೆ ಅಳುತ್ತಿದ್ದ ಮಗುವನ್ನುಆಟೋದಿಂದ ಆಚೆ ಎಸೆದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸತತ 4 ಗಂಟೆಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ, ನಂತರ ಆಟೋದಿಂದ ಜಿಗಿದ ಆಕೆ ವಾಪಸ್ ಮಗುವನ್ನು ಎಸೆದಿದ್ದ ಸ್ಥಳಕ್ಕೆ ತಲುಪಿದ್ದಾಳೆ.
ಪ್ರಜ್ಞಾ ಹೀನವಾಗಿ ಬಿದ್ದಿದ್ದ ಮಗುವನ್ನು ಎತ್ತಿಕೊಂಡು ಮೆಟ್ರೋ ರೈಲಿನಲ್ಲಿ ಸ್ಥಳೀಯ ಆಸ್ಪತ್ರೆಗೆ ತೆರಳಿದಳು, ಮಗುವನ್ನು ಪರಿಶೀಲಿಸಿದ ವೈದ್ಯರು ಮಗು ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ, ಇದನ್ನು ನಂಬದ ಆಕೆ ಮತ್ತೊಂದು ಆಸ್ಪತ್ರೆಗೆ ತೆರಳಿದ್ದಾಳೆ, ಆದರೆ ಅಲ್ಲಿಯೂ ಮಗು ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ, 
ನಂತರ ಅಲ್ಲಿಂದ ಪೊಲೀಸ್ ಠಾಣೆಗೆ ತೆರಳಿದ ಆಕೆ ದೂರು ದಾಖಲಿಸಿದ್ದಾಳೆ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುಮಾರು 50 ಆಟೋ ರಿಕ್ಷಾ ಡ್ರೈವರ್ ಗಳನ್ನ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತೆ ನೀಡಿದ ಹೇಳಿಕೆ ಮೇಲೆ ಆರೋಪಿಗಳ ಶಂಕಿತ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.