ಪ್ರಧಾನ ಸುದ್ದಿ

ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಮಹಿಳಾ ಸಿಬ್ಬಂದಿಯಿಂದ ಚಪ್ಪಲಿ ಸೇವೆ: ವಿಡಿಯೋ ವೈರಲ್

ಪಬ್ ವೊಂದರ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಚಪ್ಪಲಿಯಿಂದ ಸಾರ್ವಜನಿಕವಾಗಿಯೇ ಥಳಿಸಿರುವ ಘಟನೆ ಗುರಗಾವ್ ನಲ್ಲಿ ...

ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಮಹಿಳಾ ಸಿಬ್ಬಂದಿಯಿಂದ ಚಪ್ಪಲಿ ಸೇವೆ: ವಿಡಿಯೋ ವೈರಲ್
ಕಾಮುಕನಿಗೆ ಚಪ್ಪಲಿಯಿಂದ ಥಳಿತ
Published On :
ಗುರಗಾವ್: ಪಬ್ ವೊಂದರ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಚಪ್ಪಲಿಯಿಂದ  ಸಾರ್ವಜನಿಕವಾಗಿಯೇ ಥಳಿಸಿರುವ ಘಟನೆ ಗುರಗಾವ್ ನಲ್ಲಿ ನಡೆದಿದ್ದು, ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರಗಾವ್ ಎಂಜಿ ರಸ್ತೆಯಲ್ಲಿ  ಈ ಘಟನೆ ನಡೆದಿದ್ದು. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಪಬ್‍ನ ಮಹಿಳಾ ಸಿಬ್ಬಂದಿ ಬಳಿ ಬಂದು ಹಿಂದಿನಿಂದ ಹಿಡಿದುಕೊಂಡಿದ್ದಾನೆ. ಈ ವೇಳೆ ಆಕೆ ತನ್ನ ಕಾಲಿನಲ್ಲಿದ್ದ ಚಪ್ಪಲಿಯಿಂದ ಆತನಿಗೆ ಥಳಿಸಿದ್ದಾಳೆ. 
ತಕ್ಷಣವೇ ಮಹಿಳೆಯ ಸಹೋದ್ಯೋಗಿಗಳು ಆಕೆಯ ನೆರವಿಗೆ ಧಾವಿಸಿದ್ದು, ಆ ವ್ಯಕ್ತಿಗೆ ಚಪ್ಪಲಿಯಿಂದ ಬಾರಿಸಿದ್ದಾರೆ. ಘಟನೆ ನಡೆದ ವೇಳೆ ಸ್ಥಳದಲ್ಲಿ ಪೊಲೀಸರು ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಪುರುಷ ಹಾಗೂ ಮಹಿಳಾ ಪೇದೆಗಳನ್ನ ನಿಯೋಜಿಸಿದ್ದೇವೆ. ಸಂತ್ರಸ್ಥರು ಪೊಲೀಸರ ಬಳಿ ಬಂದಾಗ ಎಫ್‍ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇವೆ ಎಂದು ಸಹಾಯಕ ಪೊಲೀಸ್ ಆಯುಕ್ತರಾದ ಮನಿಷ್ ಸೆಹ್ಗಲ್  ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.