ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ರದ್ಧುಗೊಳಿಸಲು ತೀರ್ಮಾನಿಸಿದೆ...

Published On :
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ರದ್ಧುಗೊಳಿಸಲು ತೀರ್ಮಾನಿಸಿದೆ.
ಸುಮಾರು 1800 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಡಿಎ ನಿರ್ಮಿಸಲು ಉದ್ದೇಶಿಸಿತ್ತು. ಹೆಬ್ಬಾಳ-ಚಾಲುಕ್ಯ ವೃತ್ತ ನಡುವಿನ 6.7 ಕಿ.ಮೀ ಸ್ಟೀಲ್ ಬ್ರಿಡ್ಜ್ ನಿರ್ಮಾಣವನ್ನು ಹಲವು ಸಂಘಟನೆಗಳು ವಿರೋಧಿಸಿದ್ದವು. ಅಲ್ಲದೆ ಬೆಂಗಳೂರಿನ ಹಲವು ಕಡೆ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದ್ದವು.
ಇದೇ ವೇಳೆ ಸಿದ್ದರಾಮಯ್ಯ ಅವರು ಸ್ಟೀಲ್ ಬ್ರಿಡ್ಜ್ ಯೋಜನೆಗಾಗಿ 65 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದರು. ಈ ಪ್ರಕಣ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬೃಹತ್ ಯೋಜನೆಯನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSiddaramaiahಸಿದ್ದರಾಮಯ್ಯState Governmentರಾಜ್ಯ ಸರ್ಕಾರKarnatakaಕರ್ನಾಟಕSteel Bridge projectಸ್ಟೀಲ್ ಬ್ರಿಡ್ಜ್ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


