ಮಾನನಷ್ಟ ಮೊಕದ್ದಮೆ; ಕೇಜ್ರಿವಾಲ್ ಅವರಿಗೆ ಕೋರ್ಟ್ ಸಮನ್ಸ್
ರಾಜ್ಯಸಭಾ ಸದಸ್ಯ ಮತ್ತು ಎಸ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಭಾಷ್ ಚಂದ್ರ ಸಲ್ಲಸಿರುವ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಆಲಿಸಿದ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

Published On :
ನವದೆಹಲಿ: ರಾಜ್ಯಸಭಾ ಸದಸ್ಯ ಮತ್ತು ಎಸ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಭಾಷ್ ಚಂದ್ರ ಸಲ್ಲಸಿರುವ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ಆಲಿಸಿದ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆವರಿಗೆ ಸೋಮವಾರ ಸಮನ್ಸ್ ನೀಡಿದೆ.
ಕೋರ್ಟ್ ಮುಂದೆ ಜುಲೈ ೨೯ ರೊಳಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಮೆಟ್ರೋಪಾಲಿಟನ್ ಮೆಜೆಸ್ಟ್ರೇಟ್ ಸ್ನಿಗ್ಧ ಸರ್ವರಿಯ ಸೂಚಿಸಿದ್ದಾರೆ.
ನೋಟು ಹಿಂಪಡೆತ ಸಮಯದಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಕೇಜ್ರಿವಾಲ್ ವಿರುದ್ಧ ಚಂದ್ರ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದಾರೆ.
ಕಪ್ಪು ಹಣ ಸಂಗ್ರಹಿಸಿರುವ ಪಟ್ಟಿಯಲ್ಲಿ ಚಂದ್ರ ಹೆಸರನ್ನು ಸೇರಿಸಿ ಆಮ್ ಆದ್ಮಿ ಪಕ್ಷದ ಮುಖಂಡ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದರು.
"ನವೆಂಬರ್ ೧೧ ರ ಪತ್ರಿಕಾ ಗೋಷ್ಠಿಯಲ್ಲಿ ಕೇಜ್ರಿವಾಲ್ ನನ್ನ ವಿರುದ್ಧ ಸುಳ್ಳು, ತಿರುಚಿದ ಮತ್ತು ಮಾನನಷ್ಟ ಆರೋಪಗಳನ್ನು ಮಾಡಿದ್ದಾರೆ"ಎಂದು ಚಂದ್ರ ಅರ್ಜಿಯಲ್ಲಿ ದೂರಿದ್ದಾರೆ.
ಐಪಿಸಿ ಸೆಕ್ಷನ್ ೫೦೦ರಡಿ ಕೇಜ್ರಿವಾಲ್ ಅವರಿಗೆ ಶಿಕ್ಷೆ ನೀಡಬೇಕೆಂದು ಚಂದ್ರ ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


