ಪ್ರಧಾನ ಸುದ್ದಿ

ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಿಜಿಟಲ್ ಸಾಕ್ಷ್ಯ ವಶಕ್ಕೆ ಪಡೆದ ಪೊಲೀಸರು

ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳನ್ನು....

ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಿಜಿಟಲ್ ಸಾಕ್ಷ್ಯ ವಶಕ್ಕೆ ಪಡೆದ ಪೊಲೀಸರು
ಪಲ್ಸರ್ ಸುನಿ
Published On :
ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗುರುವಾರ ಕೇರಳ ಪೊಲೀಸರು ಹೇಳಿದ್ದರೆ.
ಬ್ಲಾಕ್ ಮೇಲ್ ಮಾಡುವ ಉದ್ದೇಶದಿಂದ ಖ್ಯಾತ ಮಲೆಯಾಳಂ ನಟಿಯನ್ನು ಅಪಹರಣ ಮಾಡಿ, ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ ಚಿತ್ರೋದ್ಯಮದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಈ ಘಟನೆಯ ಹಿಂದೆ ಬೇರೆ ಯಾವುದೇ ಪಿತೂರಿ ಅಥವಾ ಒಳಸಂಚು ಇಲ್ಲ ಎಂದಿದ್ದಾರೆ.
ಫೆಬ್ರವರಿ 17ರಂದು ನಟಿಯ ಕಾರು ಚಾಲನೆ ಮಾಡುತ್ತಿದ್ದ ಮಾರ್ಟಿನ್ ಸಹಕಾರದೊಂದಿಗೆ ಪ್ರಮುಖ ಆರೋಪಿ ಪಲ್ಸರ್ ಸುನಿ, ನಟಿಯ ಅಪಹರಣಕ್ಕೆ ಸಂಚು ರೂಪಿಸಿದ್ದ. ಇದರ ಹಿಂದೆ ಬ್ಲಾಕ್ ಮೇಲ್ ಮಾಡುವ ಉದ್ದೇಶ ಇದ್ದು, ಘಟನೆಗೆ ಸಂಬಂಧಿಸಿದ ಎಲ್ಲಾ ಡಿಜಿಟಲ್ ಸಾಕ್ಷ್ಯಗಳನ್ನು ನಾವು ವಶಕ್ಕೆ ಪಡೆದಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಲೆಯಾಳಂ ಚಿತ್ರೋದ್ಯಮದ ಪ್ರಮುಖ ನಟಿಯೊಬ್ಬರನ್ನು ಅಪಹರಣ ಮಾಡಿ, ಲೈಂಗಿಕ ಕಿರುಕುಳ ನೀಡುವ ಮತ್ತು ಅದನ್ನು ಚಿತ್ರಿಕರಿಸುವ ಮೂಲಕ ಬ್ಲಾಕ್ ಮೇಲ್ ಮಾಡುವ ಬಗ್ಗೆ ಕಳೆದ ತಿಂಗಳಿಂದ ಪಲ್ಸರ್ ಸುನಿ ಹಾಗೂ ಮಾರ್ಟಿನ್ ಸಂಚು ರೂಪಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.